ಕೊರೋನಾ ವೈರಸ್ ಭೀತಿ: ಜೆಸಿಬಿ ಮೂಲಕ ಶಹೀನ್ ಭಾಗ್ ಪ್ರತಿಭಟನಾ ಸ್ಥಳ ತೆರವು

ಮಾರಕ ಕೊರೋನಾ ವೈರಸ್ ಭೀತಿಯಿಂದಾಗಿ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ದೆಹಲಿಯ ಶಹೀನ್ ಭಾಗ್ ನ ಸಿಎಎ ವಿರೋಧಿ ಪ್ರತಿಭಟನಾಕಾರನ್ನು ತೆರವುಗೊಳಿಸಲಾಗಿದೆ.

Published: 24th March 2020 01:01 PM  |   Last Updated: 24th March 2020 01:01 PM   |  A+A-


Shaheen Bagh Anti-CAA Protesters Removed Amid Delhi Lockdown

ಜೆಸಿಬಿ ಮೂಲಕ ಶಹೀನ್ ಭಾಗ್ ಪ್ರತಿಭಟನಾ ಸ್ಥಳ ತೆರವು

Posted By : srinivasamurthy
Source : ANI

ನವದೆಹಲಿ: ಮಾರಕ ಕೊರೋನಾ ವೈರಸ್ ಭೀತಿಯಿಂದಾಗಿ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ದೆಹಲಿಯ ಶಹೀನ್ ಭಾಗ್ ನ ಸಿಎಎ ವಿರೋಧಿ ಪ್ರತಿಭಟನಾಕಾರನ್ನು ತೆರವುಗೊಳಿಸಲಾಗಿದೆ.

ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿ ಸೇರಿದಂತೆ ದೇಶದ ಎಲ್ಲ ರಾಜ್ಯಗಳನ್ನು ಲಾಕ್‍ಡೌನ್ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈ ಹಿಂದೆ ನೂರಾರು ಮಹಿಳೆಯರು ಹಲವು ದಿನಗಳಿಂದ ಬೀಡುಬಿಟ್ಟಿದ್ದ ಶಾಹೀನ್ ಬಾಗ್ ಪ್ರತಿಭಟನಾ ಸ್ಥಳವನ್ನು ದೆಹಲಿ ಪೊಲೀಸ್ ಸಿಬ್ಬಂದಿ ಇಂದು ತೆರವುಗೊಳಿಸಿದ್ದಾರೆ.

ಜೆಸಿಬಿ ಬಳಸಿ ಪ್ರತಿಭಟನಾಕಾರರು ಹಾಕಿದ್ದ ಟೆಂಟ್ ಗಳನ್ನು ಅಧಿಕಾರಿಗಳು ಕಿತ್ತುಹಾಕಿದ್ದು, ಪ್ರತಿಭಟನಾಕಾರರನ್ನು ಶಾಹೀನ್ ಬಾಗ್‍ನಿಂದ ಬಲವಂತವಾಗಿ ಹೊರಹಾಕಲಾಗಿದೆ. ಈ ವೇಳೆ ಮಹಿಳಾ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ಲಾದ ನಡೆಯಿತು. ಬಳಿಕ ಪೊಲೀಸರು ಸೆಕ್ಷನ್ 144 ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ 6 ಮಹಿಳೆಯರು ಮತ್ತು 3 ಪುರುಷರನ್ನು ಶಾಹೀನ್ ಬಾಗ್‍ನಿಂದ ವಶಕ್ಕೆ ಪಡೆದಿದ್ದಾರೆ. ಬಳಿಕ ಜೆಸಿಬಿ ಮೂಲಕ ಸ್ಥಳವನ್ನು ತೆರವುಗೊಳಿಸಲಾಯಿತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ದೆಹಲಿ ಆಗ್ನೇಯ ಡಿಸಿಪಿ, ‘ದೆಹಲಿ ಲಾಕ್‍ಡೌನ್ ಘೋಷಿಸಿದ್ದರಿಂದ ಶಾಹೀನ್ ಬಾಗ್ ಪ್ರತಿಭಟನಾ ಸ್ಥಳವನ್ನು ತೊರೆಯುವಂತೆ ಕೋರಲಾಗಿತ್ತು. ಆದರೆ ಪ್ರತಿಭಟನಾಕಾರರು ನಿರಾಕರಿಸಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಯಿತು. ಈಗಾಗಲೇ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲಾಗಿದೆ. ಅದರಲ್ಲಿ ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp