ಕೊರೋನಾ ವೈರಸ್: ಮುಂಬೈನಲ್ಲಿ 65 ವರ್ಷದ ಮಹಿಳೆ ಬಲಿ, ಸೋಂಕಿತ ಸಂಖ್ಯೆ 124ಕ್ಕೆ ಏರಿಕೆ

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಹೊಸದಾಗಿ ಇಬ್ಬರು ವ್ಯಕ್ತಿಗಳಲ್ಲಿ ಗುರುವಾರ ವೈರಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಅಲ್ಲದೆ, ವೈರಸ್'ಗೆ ಮುಂಬೈ ಮೂಲದ ಮಹಿಳೆಯೊಬ್ಬರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

Published: 26th March 2020 11:46 AM  |   Last Updated: 26th March 2020 11:46 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಹೊಸದಾಗಿ ಇಬ್ಬರು ವ್ಯಕ್ತಿಗಳಲ್ಲಿ ಗುರುವಾರ ವೈರಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಅಲ್ಲದೆ, ವೈರಸ್'ಗೆ ಮುಂಬೈ ಮೂಲದ ಮಹಿಳೆಯೊಬ್ಬರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

65 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಮಹಿಳೆ ವೈರಸ್ ನಿಂದಲೇ ಸಾವನ್ನಪ್ಪಿದ್ದಾರೆಯೇ ಅಥವಾ ಬೇರಾವ ಕಾರಣಗಳಿಂದ ಸಾವನ್ನಪ್ಪಿದ್ದಾರೆಯೇ ಎಂಬುದರ ಕುರಿತ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಹೇಳಿದೆ. 

ಈ ನಡುವೆ ಮಹಾರಾಷ್ಟ್ರದ ಪುಣೆ ಹಾಗೂ ಮುಂಬೈನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ವೈರಸ್ ಹರಡುವಿಕೆ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಮಹಾರಾಷ್ಟ್ರ ಸರ್ಕಾರ 21 ದಿನಗಳ ಕಾಲ ರಾಜ್ಯವನ್ನು ಸಂಪೂರ್ಣವಾಗಿ ಬಂದ್ ಮಾಡಿಸಿದೆ. ಮಾರ್ಚ್ 31ರವರೆಗೂ ರಾಜ್ಯ ಸಂಪೂರ್ಣವಾಗಿ ಲಾಕ್ ಡೌನ್ ಆಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ಎಂದು ವರದಿಗಳು ತಿಳಿಸಿವೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp