ಕೊರೋನಾ ವೈರಸ್: ದೇಶಾದ್ಯಂತ ಲಾಕ್ ಡೌನ್ ಹಿನ್ನಲೆ, ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ ಸರ್ಕಾರ 

ಕೊರೋನಾ ವೈರಸ್ ಪ್ರಸರಣ ತಪ್ಪಿಸುವ ಉದ್ದೇಶದಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹ ರದ್ದು ಮಾಡಿದೆ.

Published: 26th March 2020 07:42 AM  |   Last Updated: 26th March 2020 07:42 AM   |  A+A-


Govt suspends toll collection on highways

ಸಂಗ್ರಹ ಚಿತ್ರ

Posted By : Srinivasamurthy VN
Source : PTI

ನವದೆಹಲಿ: ಕೊರೋನಾ ವೈರಸ್ ಪ್ರಸರಣ ತಪ್ಪಿಸುವ ಉದ್ದೇಶದಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹ ರದ್ದು ಮಾಡಿದೆ.

ಈ ಕುರಿತಂತೆ ಸ್ವತಃ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದು, ದೇಶದ ಎಲ್ಲಾ ಟೋಲ್‌ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹಣೆಯನ್ನು ಬುಧವಾರ ರಾತ್ರಿಯಿಂದಲೇ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ ಎಂದು ಹೇಳಿದ್ದಾರೆ.

'ಕೊರೋನಾ ವೈರಸ್‌ ಭೀತಿ ಇರುವ ಈ ಸಂದರ್ಭದಲ್ಲಿ ಅಗತ್ಯ ಸೇವೆಗಳು ತುರ್ತಾಗಿ ಲಭ್ಯವಾಗಬೇಕೆಂಬ ಉದ್ದೇಶಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕೋವಿಡ್‌ 19 ಹಿನ್ನೆಲೆಯಲ್ಲಿ ದೇಶದ ಟೋಲ್‌ ಪ್ಲಾಜಾಗಳಲ್ಲಿ ಟೋಲ್‌ ಸಂಗ್ರಹವನ್ನು ತಾತ್ಕಾಲಿಕವಾಗಿ ಸರ್ಕಾರ  ನಿರ್ಬಂಧಿಸಿದೆ, ತುರ್ತು ಸೇವೆಗಳಿಗಿರುವ ತೊಡಕು ನಿವಾರಿಸಲಷ್ಟೇ ಈ ನಿರ್ಧಾರ ಕೈಗೊಂಡಿಲ್ಲ. ಬದಲಿಗೆ ಸಮಯ ಉಳಿಸುವ ಸಲುವಾಗಿಯೂ ಈ ತೀರ್ಮಾನ ಮಾಡಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.

ಅಂತೆಯೇ ರಸ್ತೆಗಳ ನಿರ್ವಹಣೆ ಮತ್ತು ಹೆದ್ದಾರಿ ತುರ್ತು ಸೇವೆಗಳು ಎಂದಿನಂತೇ ಲಭ್ಯವಾಗಲಿವೆ ಎಂದೂ ಗಡ್ಕರಿ ಅವರು ಸ್ಪಷ್ಟಪಡಿಸಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp