ಮಧ್ಯಪ್ರದೇಶ: ಪ್ರಯಾಣ ಹಿನ್ನೆಲೆ ಇಲ್ಲದ ಕೊರೋನಾ ವೈರಸ್ ಶಂಕಿತ ಸಾವು!

ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆ ಇಲ್ಲದ, ಕೊರೋನಾ ವೈರಸ್ ಸೋಂಕು ಶಂಕಿತ ವ್ಯಕ್ತಿಯೋರ್ವ ಮೃತಪಟ್ಟಿರುವುದು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೋಪಾಲ್: ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆ ಇಲ್ಲದ, ಕೊರೋನಾ ವೈರಸ್ ಸೋಂಕು ಶಂಕಿತ ವ್ಯಕ್ತಿಯೋರ್ವ ಮೃತಪಟ್ಟಿರುವುದು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. 
 
47 ವರ್ಷದ ವ್ಯಕ್ತಿಯನ್ನು ಕೊರೋನಾ ಶಂಕೆಯ ಹಿನ್ನೆಲೆಯಲ್ಲಿ ಇಂಡೋರ್ ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ. ಆತನ ವೈದ್ಯಕೀಯ ವರದಿ ಇನ್ನಷ್ಟೇ ಬರಬೇಕಿದೆ ಎಂದು ಮಹಾತ್ಮಾ ಗಾಂಧಿ ಮೆಮೊರಿಯಲ್ ಮೆಡಿಕಲ್ ಕಾಲೇಜ್ ನ ವಕ್ತಾರರು ಹೇಳಿದ್ದಾರೆ. 

ಉಸಿರಾಟದ ಸಮಸ್ಯೆ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಇದಕ್ಕೂ ಮುನ್ನ ಉಜ್ಜೈನ್ ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಗೆ ಯಾವುದೇ ಪ್ರಯಾಣದ ಹಿನ್ನೆಲೆ ಇರಲಿಲ್ಲ.  ಮಧ್ಯಪ್ರದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com