ಸರಿಯಾದ ಹಾದಿಯಲ್ಲಿ ಮೊದಲ ಹೆಜ್ಜೆ: ಮೋದಿ ಸರ್ಕಾರದ ಬಗ್ಗೆ ರಾಹುಲ್ ಅಪರೂಪದ ಮೆಚ್ಚುಗೆ 

ಕೊರೋನಾ ವೈರಸ್ ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ಕೇಂದ್ರ ಸರ್ಕಾರ ಒಂದಷ್ಟು ಕ್ರಮಗಳನ್ನು ಘೋಷಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ಸರಿಯಾದ ಹಾದಿಯಲ್ಲಿ ಮೊದಲ ಹೆಜ್ಜೆ: ಮೋದಿ ಸರ್ಕಾರದ ಬಗ್ಗೆ ರಾಹುಲ್ ಅಪರೂಪದ ಮೆಚ್ಚುಗೆ 

ನವದೆಹಲಿ: ಕೊರೋನಾ ವೈರಸ್ ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ಕೇಂದ್ರ ಸರ್ಕಾರ ಒಂದಷ್ಟು ಕ್ರಮಗಳನ್ನು ಘೋಷಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬೆನ್ನಲ್ಲೇ ಟ್ವೀಟ್ ಮಾಡಿದ ರಾಹುಲ್ ಗಾಂಧಿ ಸರಿಯಾದ ಹಾದಿಯಲ್ಲಿ ಮೊದಲ ಹೆಜ್ಜೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಸರ್ಕಾರ ಕೊರೋನಾ ವಿರುದ್ಧ ಹೋರಾಡುವುದಕ್ಕೆ ಆರ್ಥಿಕ ಪ್ಯಾಕೇಜ್ ನ್ನು ಘೋಷಿಸಿದೆ. ಸರಿಯಾದ ಹಾದಿಯಲ್ಲಿ ಮೊದಲ ಹೆಜ್ಜೆ ಇದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ಬೆಂಬಲ ನೀಡುವುದಾಗಿ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮೋದಿ ಸರ್ಕಾರದ ಘೋಷಣೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com