ಮಹಾರಾಷ್ಟ್ರ: ಕೊರೋನಾ ಪೀಡಿತ ಐವರು ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಪೀಡಿತ ಐವರು ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪುಣೆ: ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಪೀಡಿತ ಐವರು ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

ಪುಣೆಯ ಇಬ್ಬರು, ಪಿಂಪ್ರಿ ಮತ್ತು ಚಿಂಚವಾಡ್ ನ ಮೂವರು ಕೊರೋನಾ ಪೀಡಿತ ರೋಗಿಗಳನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.

ಪುಣೆಯ ನಾಯ್ಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರನ್ನು ನಿನ್ನೆ ರಾತ್ರಿಯೇ ಡಿಸ್ಚಾರ್ಜ್ ಮಾಡಲಾಗಿದೆ. ಈ ಇಬ್ಬರಿಗೆ ಈಗ ಕೊರೋನಾ ವೈರಸ್ ನೆಗಟಿವ್ ಬಂದಿದೆ ಎಂದು ಪುಣೆ ಮಹಾನಗರ ಪಾಲಿಕೆ ಮುಖ್ಯ ಆರೋಗ್ಯ ಅಧಿಕಾರಿ ಡಾ. ರಾಮಚಂದ್ರ ಹಂಕೆರೆ ಅವರು ಹೇಳಿದ್ದಾರೆ.

ಪುಣೆಯಲ್ಲಿ ಇದುವರೆಗೆ 20 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಪೈಕಿ ಏಳು ಮಂದಿಗೆ 14 ದಿನಗಳ ಐಸೋಲೆಷನ್ ನಂತರ ನೆಗಟಿವ್ ಬಂದಿದೆ. ಇನ್ನು ಉಳಿದ 13 ಜನರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com