ವಲಸಿಗರಿಗೆ ಆಹಾರ, ವಸತಿ ನೀಡಿ: ರಾಹುಲ್ ಗಾಂಧಿ ಮನವಿ

ಮೂರು ವಾರಗಳ ಸಂಪೂರ್ಣ ಲಾಕ್ ಡೌನ್ ನ ನಾಲ್ಕನೇ ದಿನಕ್ಕೆ ಶನಿವಾರ ಕಾಲಿಟ್ಟಿದ್ದು ತಮ್ಮ ಮನೆಗಳಿಗೆ ಹೋಗಲು ಪ್ರಯತ್ನಿಸುತ್ತಿರುವ ವಲಸಿಗ ಕೂಲಿ ಕಾರ್ಮಿಕರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಮೂರು ವಾರಗಳ ಸಂಪೂರ್ಣ ಲಾಕ್ ಡೌನ್ ನ ನಾಲ್ಕನೇ ದಿನಕ್ಕೆ ಶನಿವಾರ ಕಾಲಿಟ್ಟಿದ್ದು ತಮ್ಮ ಮನೆಗಳಿಗೆ ಹೋಗಲು ಪ್ರಯತ್ನಿಸುತ್ತಿರುವ ವಲಸಿಗ ಕೂಲಿ ಕಾರ್ಮಿಕರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ವಲಸಿಗರಿಗೆ ಆಶ್ರಯ ಮತ್ತು ಆಹಾರಕ್ಕೆ ತೊಂದರೆಯಾಗುತ್ತಿರುವ ಸಂದರ್ಭದಲ್ಲಿ ಸಹಾಯ ಮಾಡಲು ಸಾಧ್ಯವಿರುವವರು ಸಹಾಯ ಮಾಡಿ ಎಂದು ರಾಹುಲ್ ಗಾಂಧಿ ಜನರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ, ಸಂಪೂರ್ಣ ಲಾಕ್ ಡೌನ್ ನಿಂದಾಗಿ ನೂರಾರು ವಲಸಿಗ ಸಹೋದರ, ಸಹೋದರಿಯರು ತಮ್ಮ ಗ್ರಾಮಗಳಿಗೆ ಬರಿಗಾಲಿನಲ್ಲಿ ಹೋಗಬೇಕಾದ ಪರಿಸ್ಥಿತಿಯಿದೆ. ಅಂತವರಿಗೆ ಆಶ್ರಯ, ಆಹಾರ ನೀಡಿ ಸಹಾಯ ಮಾಡಿ, ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಬೆಂಬಲಿಗರಿಗೆ ವಿಶೇಷ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ಮೂಲಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಸಾವಿರಾರು ಮಂದಿ ವಲಸಿಗ ಕಾರ್ಮಿಕರು ಉದ್ಯೋಗ ಕಳೆದುಕೊಂಡು ತಮ್ಮೂರಿಗೆ ಹೋಗಲು ಪರದಾಡುತ್ತಿದ್ದಾರೆ. ಅಂತವರಿಗೆ ಆಶ್ರಯ, ಆಹಾರ ವ್ಯವಸ್ಥೆ ಮಾಡಿ, ಅವರ ಊರಿಗೆ ಹೋಗಲು ನೂರಾರು ಕಿಲೋಮೀಟರ್ ನಡೆದುಕೊಂಡೇ ಹೋಗಬೇಕಾಗುತ್ತದೆ ಎಂದು ವಲಸಿಗರ ಸಮಸ್ಯೆಯನ್ನು ರಾಹುಲ್ ಗಾಂಧಿ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com