ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿ, ಭಾರತದಲ್ಲಿ ಸಾವಿನ ಸಂಖ್ಯೆ 26ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಭಾನುವಾರ 26ಕ್ಕೇರಿದೆ. ಒಟ್ಟು ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದ್ದು ಇಂದು ಮಹಾರಾಷ್ಟ್ರದಲ್ಲಿ ಮತ್ತೊಬ್ಬ ವ್ಯಕ್ತಿ ಮೃತಪಡುವ ಮೂಲಕ ಅಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ7ಕ್ಕೇರಿದೆ.
ಲಾಕ್ ಡೌನ್ ಮಧ್ಯೆ ತಮ್ಮವರನ್ನು ಕರೆದುಕೊಂಡು ಊರಿಗೆ ಬರಿಗಾಲಿನಲ್ಲಿ ಹೋಗುತ್ತಿರುವ ವಲಸಿಗರು
ಲಾಕ್ ಡೌನ್ ಮಧ್ಯೆ ತಮ್ಮವರನ್ನು ಕರೆದುಕೊಂಡು ಊರಿಗೆ ಬರಿಗಾಲಿನಲ್ಲಿ ಹೋಗುತ್ತಿರುವ ವಲಸಿಗರು

ನವದೆಹಲಿ:ಭಾರತದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಭಾನುವಾರ 26ಕ್ಕೇರಿದೆ. ಒಟ್ಟು ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದ್ದು ಇಂದು ಮಹಾರಾಷ್ಟ್ರದಲ್ಲಿ ಮತ್ತೊಬ್ಬ ವ್ಯಕ್ತಿ ಮೃತಪಡುವ ಮೂಲಕ ಅಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ7ಕ್ಕೇರಿದೆ.

ಇಂದು ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಹೊಸ ಕೊರೋನಾ ಪೀಡಿತ ಪ್ರಕರಣಗಳು ವರದಿಯಾಗಿವೆ. ಭಾರತದ ಮಹಾರಾಷ್ಟ್ರ, ಕೇರಳ, ತೆಲಂಗಾಣ, ಗುಜರಾತ್, ಕರ್ನಾಟಕ, ಮಧ್ಯ ಪ್ರದೇಶ, ತಮಿಳು ನಾಡು, ಬಿಹಾರ, ಪಂಜಾಬ್, ದೆಹಲಿ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಗಳಲ್ಲಿ ಕೊರೋನಾ ವೈರಸ್ ನಿಂದ ರೋಗಿಗಳು ಮೃತಪಟ್ಟಿದ್ದಾರೆ.

ವಿಶ್ವದಲ್ಲಿ ಯುರೋಪ್ ಖಂಡ ಸದ್ಯಕ್ಕೆ ಅತ್ಯಂತ ಸೋಂಕಿತ ಪ್ರದೇಶವಾಗಿದ್ದು ಇಲ್ಲಿ 20 ಸಾವಿರಕ್ಕೂ ಹೆಚ್ಚು ಸಾವು ಮತ್ತು 3 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇಟಲಿಯಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸ್ಪೈನ್ ನಲ್ಲಿ ಈ ಸಂಖ್ಯೆ 5,600 ಆಗಿದೆ. ವಿಶ್ವದಲ್ಲಿ ಇಟಲಿ ಮತ್ತು ಸ್ಪೈನ್ ಅತಿ ಹೆಚ್ಚು ಸಾವು ಕಂಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com