ಕೋವಿಡ್ -19: ತಲಾ 1 ಕೋಟಿ ರೂ. ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮನವಿ

ದೇಶದಲ್ಲಿ ವ್ಯಾಪಿಸುತ್ತಿರುವ ಕೋವಿಡ್ - 19 ಸಾಂಕ್ರಾಮಿಕ ಕಾಯಿಲೆಗಳನ್ನು ತಡೆಯುವ ಸಲುವಾಗಿ ರಾಜ್ಯಸಭಾ ಸದಸ್ಯರು ಸಂಸದರ ನಿಧಿಗೆ ತಲಾ ಒಂದು ಕೋಟಿ ರೂ. ದೇಣಿಗೆ ನೀಡುವಂತೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸಲಹೆ ನೀಡಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನವದೆಹಲಿ: ದೇಶದಲ್ಲಿ ವ್ಯಾಪಿಸುತ್ತಿರುವ ಕೋವಿಡ್ - 19 ಸಾಂಕ್ರಾಮಿಕ ಕಾಯಿಲೆಗಳನ್ನು ತಡೆಯುವ ಸಲುವಾಗಿ ರಾಜ್ಯಸಭಾ ಸದಸ್ಯರು ಸಂಸದರ ನಿಧಿಗೆ ತಲಾ ಒಂದು ಕೋಟಿ ರೂ. ದೇಣಿಗೆ ನೀಡುವಂತೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸಲಹೆ ನೀಡಿದ್ದಾರೆ.

ಈ ಕುರಿತು ಎಲ್ಲಾ ಸಂಸದರಿಗೆ ಪತ್ರ ಬರೆದಿರುವ ನಾಯ್ಡು, ದೇಶದಲ್ಲಿ ಇದೊಂದು ಅನಿರೀಕ್ಷಿತ ಪರಿಸ್ತಿತಿ ಎದುರಾಗಿದ್ದು, ಅದನ್ನು ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಖಾಸಗಿ ವಲಯ ಸೇರಿದಂತೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೋವಿಡ್ -19 ಅನ್ನು ಯಶಸ್ವಿಯಾಗಿ ಎದುರಿಸಲು ದೊಡ್ಡ ಮಟ್ಟದ ಸಂಪನ್ಮೂಲದ ಅಗತ್ಯವಿದೆ. ಆದ್ದರಿಂದ ಎಲ್ಲೆಡೆಯಿಂದ ಆರ್ಥಿಕ ಸಂಪನ್ಮೂಲ ಸಂಗ್ರಹಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

ಈ ನಡುವೆ, ಸಾರ್ವಜನಿಕರು ಕೂಡ ಮುಂದೆ ಬಂದು ಪಿಎಂ- ಕೇರ್ ನಿಧಿಗೆ ಧನಸಹಾಯ ನೀಡಿ, ವಿಪತ್ತು ನಿರ್ವಹಣಾ ಕೇಂದ್ರ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ನಾಯ್ಡು ಕರೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com