ಭಾರತದಲ್ಲಿ ನಿಲ್ಲದ ಕೊರೋನಾ ಅಬ್ಬರ: ಗುಜರಾತ್‌ನಲ್ಲಿ 6ನೇ ಸಾವು, ಮೃತರ ಸಂಖ್ಯೆ 31ಕ್ಕೆ ಏರಿಕೆ!

ಕೊರೋನಾ ವೈರಸ್ ಗೆ ಭಾರತದಲ್ಲಿ ಅತೀ ಹೆಚ್ಚು ಮಂದಿ ಸಾವಿಗೀಡಾದ ರಾಜ್ಯಗಳ ಪೈಕಿ ಗುಜರಾತ್ ಎರಡನೇ ಸ್ಥಾನದಲ್ಲಿದ್ದು ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೇರಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 31ಕ್ಕೇರಿದೆ.
ವೈದ್ಯರು
ವೈದ್ಯರು

ನವದೆಹಲಿ: ಕೊರೋನಾ ವೈರಸ್ ಗೆ ಭಾರತದಲ್ಲಿ ಅತೀ ಹೆಚ್ಚು ಮಂದಿ ಸಾವಿಗೀಡಾದ ರಾಜ್ಯಗಳ ಪೈಕಿ ಗುಜರಾತ್ ಎರಡನೇ ಸ್ಥಾನದಲ್ಲಿದ್ದು ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೇರಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 31ಕ್ಕೇರಿದೆ. 

ಪಶ್ಚಿಮ ಬಂಗಾಳದಲ್ಲಿ ಬೆಳಗ್ಗೆ ಕೊರೋನಾ ವೈರಸ್ ನಿಂದ ಒಬ್ಬರು ಮೃತಪಟ್ಟಿದ್ದು ಇದೀಗ ಗುಜರಾತ್ ನಲ್ಲೂ ಒಬ್ಬರು ಸಾವನ್ನಪ್ಪಿದ್ದಾರೆ. 

ದೇಶದಲ್ಲಿ ಇದುವರೆಗೆ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1100ರ ಗಡಿ ದಾಟಿದೆ. ವಲಸಿಗರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈಗಾಗಲೇ ಗಡಿಗಳ ಮೂಲಕ ಸಂಚರಿಸಿರುವ ವಲಸಿಗರನ್ನು 14 ದಿನಗಳ ಕಾಲ ನಿರ್ಬಂಧದಲ್ಲಿಡುವಂತೆ ಸೂಚಿಸಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಹೊಸ ಕೇಸುಗಳು ದಾಖಲಾಗಿದ್ದು ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72ಕ್ಕೇರಿದೆ. ಪಕ್ಕದ ನೊಯ್ಡಾ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಹೆಚ್ಚು ಕೊರೋನಾ ಸೋಂಕಿತ ಕೇಸುಗಳು ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com