ಕೊವಿಡ್-19: ಮಹಾರಾಷ್ಟ್ರ, ಮಧ್ಯ ಪ್ರದೇಶದಲ್ಲಿ ಮತ್ತಿಬ್ಬರು ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 34ಕ್ಕೆ ಏರಿಕೆ

ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಇಂದು ಪುಣೆಯಲ್ಲಿ ಕೊರೋನಾ ವೈರಸ್ ಪೀಡಿತ 52 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 

ಇನ್ನು ಮಧ್ಯ ಪ್ರದೇಶದಲ್ಲಿ ಮಾರ್ಚ್ 27ರಂದು ಮೃತಪಟ್ಟಿದ್ದ ಉಜ್ಜೈನ್ ನ ಅಂಬೆರ್ ಕಾಲೋನಿಯ ನಿವಾಸಿಗೆ ಈ ಕೊರೋನಾ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಮಧ್ಯ ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದ ಭಾರತದಲ್ಲಿ ಅತೀ ಹೆಚ್ಚು ಮಂದಿ ಸಾವಿಗೀಡಾದ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಗುಜರಾತ್ ಎರಡನೇ ಸ್ಥಾನದಲ್ಲಿದೆ. ಗುಜರಾತ್ ನಲ್ಲಿ ಇಂದು ಸಾವಿನ ಸಂಖ್ಯೆ 6ಕ್ಕೇರಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 34ಕ್ಕೇರಿದೆ. 

ಪಶ್ಚಿಮ ಬಂಗಾಳದಲ್ಲಿ ಬೆಳಗ್ಗೆ ಕೊರೋನಾ ವೈರಸ್ ನಿಂದ ಒಬ್ಬರು ಮೃತಪಟ್ಟಿದ್ದು, ಇದೀಗ ಗುಜರಾತ್, ಮಧ್ಯ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲೂ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಇದುವರೆಗೆ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1196ರ ಗಡಿ ದಾಟಿದೆ. ವಲಸಿಗರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈಗಾಗಲೇ ಗಡಿಗಳ ಮೂಲಕ ಸಂಚರಿಸಿರುವ ವಲಸಿಗರನ್ನು 14 ದಿನಗಳ ಕಾಲ ನಿರ್ಬಂಧದಲ್ಲಿಡುವಂತೆ ಸೂಚಿಸಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಹೊಸ ಕೇಸುಗಳು ದಾಖಲಾಗಿದ್ದು, ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72ಕ್ಕೇರಿದೆ. ಪಕ್ಕದ ನೊಯ್ಡಾ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಹೆಚ್ಚು ಕೊರೋನಾ ಸೋಂಕಿತ ಕೇಸುಗಳು ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com