ಕೊರೋನಾ ಮರಣ ಮೃದಂಗ: ದೇಶದಲ್ಲಿ ಮತ್ತೆ ಮೂವರು ಬಲಿ, ಸಾವಿನ ಸಂಖ್ಯೆ 48, ಸೋಂಕಿತರ ಸಂಖ್ಯೆ 1400ಕ್ಕೆ ಏರಿಕೆ

ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಮಂಗಳವಾರ ಕೇರಳ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮೂವರು ಬಲಿಯಾಗಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಮಂಗಳವಾರ ಕೇರಳ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. 

ಇನ್ನು ಸೋಂಕಿತರ ಸಂಖ್ಯೆಯೂ ಕ್ಷಣಕ್ಷಣಕ್ಕೂ ಹೆಚ್ಚುತ್ತಿದ್ದು, ದೇಶದಲ್ಲಿ ಇದುವರೆಗೆ 1400 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

ಕೇರಳದಲ್ಲಿ  68 ವರ್ಷದ ವ್ಯಕ್ತಿಯೊಬ್ಬರು ಕೊರೋನಾಗೆ ಬಲಿಯಾಗಿದ್ದು, ಭಾನುವಾರವಷ್ಟೇ ಇವರಲ್ಲಿ ವೈರಸ್ ದೃಢಪಟ್ಟಿತ್ತು. ಬಳಿಕ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರ ಸಾವಿನೊಂದಿಗೆ ಕೇರಳ ರಾಜ್ಯದಲ್ಲಿ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಇದರಂತೆ ಪಶ್ಚಿಮ ಬಂಗಾಳದಲ್ಲಿಯೂ ಸೋಮವಾರ ರಾತ್ರಿ ವೈರಸ್ ಪೀಡಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹೌರಾ ಜಿಲ್ಲೆ ನಿವಾಸಿಯಾಗಿದ್ದ 40 ವರ್ಷದ ಮಹಿಳೆ ವೈರಸ್'ಗೆ ಬಲಿಯಾಗಿದ್ದು, ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಈ ವರೆಗೂ ಸೋಂಕಿಗೆ ಮೂವರು ಬಲಿಯಾಗಿದ್ದಾರೆಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಮಧ್ಯಪ್ರದೇಶದಲ್ಲಿಯೂ ವೈರಸ್'ಗೆ ಓರ್ವ ವ್ಯಕ್ತಿ ಇಂದೋರ್ ನಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ಮಧ್ಯಪ್ರದೇಶದಲ್ಲಿ ವೈರಸ್'ಗೆ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಮೃತ ಸೋಂಕಿತ ಮಹಳೆ ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಆದರೆ, ವಿದೇಶ ಪ್ರಯಾಣದ ಹಿಸ್ಟರಿ ಹೊಂದಿರಲಿಲ್ಲ. ವೈರಸ್ ನಿಂದ ಬಳಲುತ್ತಿದ್ದ ಮಹಿಳೆಯ ರಕ್ತದ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆದರೆ, ವರದಿಗೂ ಮುನ್ನವೇ ಮಹಿಳೆ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೇರಳದ ತಿರುವನಂತಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 68 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಈ ನಡುವೆ ಗಡಹ ಸಚಿವಾಲಯ ಮಾಹಿತಿ ನೀಡಿರುವ ಪ್ರಕಾರ ದೇಶದಲ್ಲಿ ಸೋಂಕಿತರ ಸಂಖ್ಯೆ 1,400ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 120 ಮಂದಿ ಈಗಾಗಲೇ ವೈರಸ್ ನಿಂದ ಗುಣಮುಖರಾಗಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com