ಮೇ 21ಕ್ಕೆ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: ಚುನಾವಣಾ ಆಯೋಗ ಘೋಷಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿಧಾನ ಪರಿಷತ್ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿರುವ ಚುನಾವಣಾ ಆಯೋಗವು ಮೇ 21 ರಂದು ರಾಜ್ಯ ವಿಧಾನ ಪರಿಷತ್ತಿನ ಒಂಬತ್ತು ಸ್ಥಾನಗಳಿಗೆ ಮತದಾನ ನಡೆಸುವುದಾಗಿ ಪ್ರಕಟಿಸಿದೆ
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿಧಾನ ಪರಿಷತ್ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿರುವ ಚುನಾವಣಾ ಆಯೋಗವು ಮೇ 21 ರಂದು ರಾಜ್ಯ ವಿಧಾನ ಪರಿಷತ್ತಿನ ಒಂಬತ್ತು ಸ್ಥಾನಗಳಿಗೆ ಮತದಾನ ನಡೆಸುವುದಾಗಿ ಪ್ರಕಟಿಸಿದೆ

ಕಳೆದ ವರ್ಷ ನವೆಂಬರ್ 28 ರಂದು ಪ್ರಮಾಣವಚನ ಸ್ವೀಕರಿಸಿದ ಠಾಕ್ರೆ ರಾಜ್ಯ ವಿಧಾನ ಸಭೆಗೆ ಆಯ್ಕೆಯಾಗಲು  ಮೇ 27 ರವರೆಗೆ ಸಮಯವಿದ್ದು,ಅವರೊಮ್ಮೆ ಆಯ್ಕೆಯಾಗುವಲ್ಲಿ ವಿಫಲವಾದರೆ ಮುಖ್ಯಮಂತ್ರಿ ಸ್ಥಾನದಿಂದದ ಕೆಳಗಿಳಿಯಬೇಕಾಗುತ್ತದೆ.

ಖಾಲಿ ಇರುವ ಒಂಬತ್ತು ಸ್ಥಾನಗಳಿಗೆ ಚುನಾವಣೆ ಘೋಷಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಬಿ ಎಸ್ ಕೊಶ್ಯರಿ ಗುರುವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಈ ಸ್ಥಾನಗಳು ಏಪ್ರಿಲ್ 24 ರಂದು ಖಾಲಿಯಾಗಿದ್ದವು.

ಮೇ 21 ರಂದು ಮತದಾನ ನಡೆಸುವ ನಿರ್ಧಾರವನ್ನು ಕೇಂದ್ರ ಚುನಾವಣಾ ಆಯೋಗ ತೆಗೆದುಕೊಂಡಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com