ನಾವು ಒಟ್ಟಾಗಿ ಕೆಲಸ ಮಾಡಿದರೆ ದೇಶದಲ್ಲಿ ಕೊರೋನಾ ಪೀಕ್ ಗೆ ಹೋಗುವುದಿಲ್ಲ: ಕೇಂದ್ರ

ದೇಶದಲ್ಲಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರ ನಡುವೆಯೇ, ಮಹಾಮಾರಿಯನ್ನು ಕಟ್ಟಿಹಾಕಲು ನಾವು ಎಲ್ಲರೂ ಒಟ್ಟಾಗಿ ಯತ್ನಿಸಿದರೆ ದೇಶದಲ್ಲಿ ಕೊವಿಡ್-19 ಯಾವತ್ತೂ ಪೀಕ್ ಗೆ ಹೋಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಲವ ಅಗರವಾಲ್
ಲವ ಅಗರವಾಲ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರ ನಡುವೆಯೇ, ಮಹಾಮಾರಿಯನ್ನು ಕಟ್ಟಿಹಾಕಲು ನಾವು ಎಲ್ಲರೂ ಒಟ್ಟಾಗಿ ಯತ್ನಿಸಿದರೆ ದೇಶದಲ್ಲಿ ಕೊವಿಡ್-19 ಯಾವತ್ತೂ ಪೀಕ್ ಗೆ ಹೋಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಕೊವಿಡ್-19 ಪ್ರಕರಣಗಳ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ಅವರು, ದೇಶದಲ್ಲಿ ಕೊರೋನಾ ವೈರಸ್ ಡಬಲ್ ಆಗುವ ಪ್ರಮಾಣ ಈಗ 12 ದಿನಕ್ಕೆ ಏರಿಕೆಯಾಗಿದೆ ಎಂದರು.

ಸಾಂಕ್ರಾಮಿಕ ರೋಗ ಸದ್ಯ ನಿಯಂತ್ರಣದಲ್ಲಿದೆ. ಒಂದು ವೇಳೆ ನಾವು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ದೇಶದಲ್ಲಿ ಕೊರೋನಾ ಪೀಕ್ ಗೆ ಹೋಗುವುದಿಲ್ಲ. ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗಬಹುದು ಅಷ್ಟೇ ಎಂದು ಅಗರವಾಲ್ ಹೇಳಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ. ಈ ಪೈಕಿ  11,762 ಮಂದಿ ಸೋಂಕಿತರು ಗುಣಮುಖರಾಗಿದ್ದು, 29, 685 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಭಾರತದ 20 ಮಹಾ ನಗರಗಳಲ್ಲಿ ಕೊರೋನಾ ವೈರಸ್‌ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಂಬೈ, ಅಹಮದಾಬದ್, ದೆಹಲಿ, ಚೆನ್ನೈ ನಗರಗಳಲ್ಲೇ ಹೆಚ್ಚು ಕೊರೋನಾ ಪೀಡಿತರಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇನ್ನು ನಿನ್ನೆ ಒಂದೇ ದಿನ 83 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1389ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com