ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆ ಮರುಸ್ಥಾಪನೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಕೇಂದ್ರಾಡಳಿತ ಪ್ರದೇಶವಾದ ಜಮ್ಮು- ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆಯನ್ನು ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು- ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆಯನ್ನು ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಲಾಕ್‌ಡೌನ್ ಸಮಯದಲ್ಲಿ ಕಣಿವೆಯಲ್ಲಿ ಒದಗಿಸಲಾಗುತ್ತಿದ್ದ 2 ಜಿ ಸಂಪರ್ಕ ಸೇವೆಯು ತರಗತಿಯ ಅಧ್ಯಯನ ನಡೆಸಲು ಸಾಧ್ಯವಾಗುವುದಿಲ್ಲವಾದ್ದರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ 4 ಜಿ ಸಂಪರ್ಕವನ್ನು ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ನ್ಯಾಯಾಲಯ ಆಲಿಸಿ ಈ ಆದೇಶ ನೀಡಿದೆ. 

ಆದರೆ, ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ 4 ಜಿ ಸೇವೆಗಳನ್ನು ಮರುಸ್ಥಾಪಿಸುವುದನ್ನು ವಿರೋಧಿಸಿದ್ದರೆ, ಅರ್ಜಿದಾರರು ಮಾ‍ತ್ರ ವೈದ್ಯರು, ವಿದ್ಯಾರ್ಥಿಗಳು, ಇತರ ವೃತ್ತಿಪರರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಗಮನಸೆಳೆದಿದ್ದಾರೆ.

ಲ್ಯಾಂಡ್‌ಲೈನ್‌ ದೂರವಾಣಿ ಸಂಖ್ಯೆಗಳನ್ನು ಪತ್ತೆಹಚ್ಚಬಹುದಾಗಿದೆ ಎಂದು ಸಾಲಿಸಿಟರ್ ಜನರಲ್ ಎಸ್‌ಜಿ ಮೆಹ್ತಾ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು. ಹೀಗಾಗಿ, ಯಾವುದೇ ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಬ್ರಾಡ್‌ಬ್ಯಾಂಡ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com