ಹೈಕೋರ್ಟ್ ನ್ಯಾಯಾಧೀಶರ ಪ್ರಮಾಣವಚನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಕಿರಿಯ ನ್ಯಾಯಾಂಗ ಅಧಿಕಾರಿಯ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕಿರಿಯ ನ್ಯಾಯಾಂಗ ಅಧಿಕಾರಿ ಪ್ರಮಾಣವಚನ ಸ್ವೀಕಾರ ತಡೆಹಿಡಿಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಕಿರಿಯ ನ್ಯಾಯಾಂಗ ಅಧಿಕಾರಿಯ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕಿರಿಯ ನ್ಯಾಯಾಂಗ ಅಧಿಕಾರಿ ಪ್ರಮಾಣವಚನ ಸ್ವೀಕಾರ ತಡೆಹಿಡಿಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಅವರ ನ್ಯಾಯಪೀಠವು ಅರ್ಜಿದಾರರು ಹಿರಿಯರಾಗಿದ್ದರೂ ಸಹ ಅವರು ಅರ್ಜಿ ಸಲ್ಲಿಸಲು ವಿಳಂಬ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ ಪ್ರಮಾಣವಚನಕ್ಕೆ 15 ನಿಮಿಷವಿದ್ದಾಗ ವಿಚಾರಣೆ ಅಸಾಧ್ಯವೆಂದು ಪೀಠ ಹೇಳಿದೆ.

ಹೈಕೋರ್ಟ್‍ನ ಹೆಚ್ಚುವರಿ ನ್ಯಾಯಾಧೀಶರಾಗಿ ಪದ್ಮರಾಜ್ ಎನ್. ದೇಸಾಯಿ ಪ್ರಮಾಣವಚನ ಸ್ವೀಕರಿಸುವುದನ್ನು ಪ್ರಶ್ನಿಸಿ ಶಿವಮೊಗ್ಗದ ಪ್ರಧಾನ ಜಿಲ್ಲಾ ನ್ಯಾಯಾಧೀಶ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಸಂಬಂಧ ಸುಪ್ರೀಂ ಕೋರ್ಟ್ ಗೆಅರ್ಜಿ ಸಲ್ಲಿಸಿದ್ದರು.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕೇವಲ 15 ನಿಮಿಷಗಳು ಬಾಕಿ ಇರುವಾಗ ನ್ಯಾಯಾಧೀಶರ ಪ್ರಮಾಣವಚನ ಸ್ವೀಕಾರ ವಿರುದ್ಧದ ಅರ್ಜಿ ವಜಾವಾಗಿದ್ದು ನ್ಯಾಯಾಧೀಶರ ಪ್ರಮಾಣವಚನ ನಿರಾತಂಕವಾಗಿ ನೆರವೇರಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com