ಕೊವಿಡ್-19 ಎಫೆಕ್ಟ್: ಇತರೆ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಶೇ. 70ರಷ್ಟು ಇಳಿಕೆ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ ಇತರೆ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ ಇತರೆ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಮಾರ್ಚ್ 25ರಂದು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ, ಕೇಂದ್ರ ಸರ್ಕಾರದ ಆರೋಗ್ಯ ವಿಮೆ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ(ಪಿಎಂಜೆಎವೈ) ಅಡಿ ಕೊರೋನಾಯೇತರ ರೋಗಿಗಳ ಸಂಖ್ಯೆ ಶೇ. 70ರಷ್ಟು ಕಡಿಮೆಯಾಗಿದೆ. ಅಲ್ಲದೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವವರ ಸಂಖ್ಯೆ ಶೇ.90ರಷ್ಟು ಕಡಿಮೆಯಾಗಿದೆ.

ಪಿಎಂಜೆಎವೈ ಅಡಿ ಪ್ರತಿ ವ್ಯಕ್ತಿಗೆ ಐದು ಲಕ್ಷ ರೂಪಾಯಿ ವರೆಗೆ ನಗದು ರಹಿತಿ ಚಿಕಿತ್ಸೆ ದೊರೆಯುತ್ತಿದ್ದು, ಸೆಪ್ಟೆಂಬರ್ 2018ರಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಅಂದಿನಿಂದ ಲಾಕ್ ಡೌನ್ ಜಾರಿಗೊಳಿಸುವವರೆಗೆ ಈ ಯೋಜನೆ ಅಡಿ ನಿತ್ಯ 30 ಸಾವಿರದಿಂದ 32 ಸಾವಿರ ಮಂದಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದರು. ಆದರೆ ಲಾಕ್ ಡೌನ್ ಜಾರಿಗೊಳಿಸಿದ ನಂತರ 5 ರಿಂದ 6 ಸಾವಿರ ಮಂದಿ ಮಾತ್ರ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಲಾಕ್ ಡೌನ್ ಸಡಿಲಗೊಳಿಸಿದ ನಂತರವೂ ಮೇ 4ರಂದು ಕೇವಲ 2500 ಮಂದಿ ಮಾತ್ರ ಪಿಎಂಜೆಎವೈ ಅಡಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಲಾಕ್ ಡೌನ್ ವೇಳೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಲು ಪ್ರಮುಖವಾಗಿ ಮೂರು ಕಾರಣಗಳಿವೆ. ಒಂದು ರೋಗಿಗಳಲ್ಲಿರುವ ಭಯ,ಸೇವೆ ಲಭ್ಯವಿಲ್ಲದಿರುವುದು ಮತ್ತು ಕೆಲವು ಆಸ್ಪತ್ರೆಗಳನ್ನು ಕೊವಿಡ್-19 ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ ಇಂದು ಭೂಷಣ್ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com