ಎನ್ ಕೌಂಟರ್ ನಲ್ಲಿ ಸಿಕ್ಕಿಹಾಕಿಕೊಂಡ ಹಿಜ್ ಬುಲ್ ಉನ್ನತ ಕಮಾಂಡರ್: ಕಾಶ್ಮೀರದಲ್ಲಿ ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ಉನ್ನತ ಕಮಾಂಡರ್ ರಿಯಾಜ್ ನೈಕೂ ಮತ್ತು ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಹಾಕಿಕೊಂಡಿರುವುದರಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಬುಧವಾರ ಸ್ಥಗಿತಗೊಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ಉನ್ನತ ಕಮಾಂಡರ್ ರಿಯಾಜ್ ನೈಕೂ ಮತ್ತು ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಹಾಕಿಕೊಂಡಿರುವುದರಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಬುಧವಾರ ಸ್ಥಗಿತಗೊಳಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಭದ್ರತಾ ಪಡೆ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ನಸುಕಿನ ಜಾವ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಬೀಘ್ಪೊರಾ ಪ್ರದೇಶದಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯಿತು.

ಕಳೆದ ರಾತ್ರಿ ಭದ್ರತಾ ಪಡೆ ಪೊಲೀಸರು ಬೀಘ್ಪೊರಾದಲ್ಲಿ ಉಗ್ರಗಾಮಿಗಳು ಅಡಗಿ ಕುಳಿತಿದ್ದ ಬಗ್ಗೆ ನಿಖರ ಮಾಹಿತಿ ಪಡೆದು ಕಾರ್ಯಾಚರಣೆ ಆರಂಭಿಸಿದ್ದರು. ಅಲ್ಲಿಂದ ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ನಿಗಾವಹಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com