ಮುಂಬೈ ಜೈಲಿನ 72 ಕೈದಿಗಳಿಗೆ ಕೊರೋನಾ ಪಾಸಿಟಿವ್: ಮಹಾ ಗೃಹ ಸಚಿವ ಅನಿಲ್ ದೇಶಮುಖ್

ಮುಂಬೈನ ಅರ್ತೂರ್ ರೋಡ್ ಜೈಲಿನ 72 ಕೈದಿಗಳಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಐಸೋಲೇಷನ್ ವಾರ್ಡ್ ಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಲ್ಘರ್: ಮುಂಬೈನ ಅರ್ತೂರ್ ರೋಡ್ ಜೈಲಿನ 72 ಕೈದಿಗಳಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಐಸೋಲೇಷನ್ ವಾರ್ಡ್ ಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಹೇಳಿದ್ದಾರೆ.

ಅರ್ತೂರ್ ರೋಡ್ ಜೈಲಿನ ಕೈದಿಗಳು ಸೇರಿದಂತೆ 8 ಕೈದಿಗಳಿಗೆ ಸೋಂಕು ತಗುಲಿದೆ ಎಂದು ಈ ಮುಂಚೆ ರಾಜ್ಯ ಸರ್ಕಾರ ಹೇಳಿತ್ತು. ಅಲ್ಲದೆ ಜೈಲಿನ ಒಳಗೆ ಹೋಗಲು ಸಿಬ್ಬಂದಿ ಸೇರಿದಂತೆ ಯಾರಿಗೂ ಅನುಮತಿ ನೀಡಿಲ್ಲ ಎಂದು ಹೇಳಿತ್ತು. ಆದರೆ ಮುನ್ನೆಚ್ಚರಿಕೆ ಕ್ರಮಗಳ ಹೊರತಾಗಿಯೂ ಈಗ ಅರ್ತೂರ್ ಜೈಲಿನ 72 ಕೈದಿಗಳಿಗೆ ಸೋಂಕು ತಗುಲಿದೆ ಎಂದು ದೇಶಮುಖ್ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಗುರುವಾರ ಒಂದೇ ದಿನ 1,362 ಮಂದಿಗೆ ಕೊರೋನಾ ವೈರಸ್ ಸೋಂಕು ತಗಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 18,120ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೊಪೆ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com