ವಿಶಾಖಪಟ್ಟಣಂ ಬಳಿಕ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್, 7 ಮಂದಿ ಅಸ್ವಸ್ಥ, 3 ಮಂದಿ ಚಿಂತಾಜನಕ!

ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿದ್ದು ಆತಂಕ ಸೃಷ್ಟಿಸಿದೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ರಾಯಗಢ(ಛತ್ತೀಸಗಢ): ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿದ್ದು ಆತಂಕ ಸೃಷ್ಟಿಸಿದೆ.

ಛತ್ತೀಸಗಢದ ರಾಯಗಢ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೇಪರ್ ಮಿಲ್ ಅನ್ನು ಶುದ್ಧಿಕರಿಸುತ್ತಿದ್ದ ವೇಳೆ ವಿಷಾನಿಲ ಸೋರಿಕೆಯಾಗಿದೆ. ಈ ವೇಳೆ ಏಳು ಮಂದಿ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. 

ಘಟನೆಯ ಬಗ್ಗೆ ನಮಗೆ ಮಾಹಿತಿ ಸಿಕ್ಕಿಲ್ಲ. ಆಸ್ಪತ್ರೆಯಿಂದ ನಾವು ಈ ಬಗ್ಗೆ ತಿಳಿದುಕೊಂಡಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ರಾಯಗಢ) ಸಂತೋಷ್ ಸಿಂಗ್ ಹೇಳಿದ್ದಾರೆ.

ಕಳೆದ ರಾತ್ರಿ ಸೋರಿಕೆ ಪ್ರಾರಂಭವಾಗಿದ್ದು, ಬೀಗ ಹಾಕಿ ಮುಚ್ಚಲಾಗಿದ್ದು, ಶೀಘ್ರದಲ್ಲೇ ಮತ್ತೆ ತೆರೆಯುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com