ಬಾಬರಿ ಮಸೀದಿ ಧ್ವಂಸ ಪ್ರಕರಣ: ಆ.31ರೊಳಗೆ ತೀರ್ಪು ಬರಲಿ: ಕೆಳ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಗಡುವು

ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಆಗಸ್ಟ್ 31ರೊಳಗೆ ತನ್ನ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಲಖನೌನಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವಕ್ಕೆ ನಿರ್ದೇಶನ ನೀಡಿದೆ.
ಬಾಬರಿ ಮಸೀದಿ ಧ್ವಂಸ ಪ್ರಕರಣ: ಆ.31ರೊಳಗೆ ತೀರ್ಪು ಬರಲಿ: ಕೆಳ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಗಡುವು

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಆಗಸ್ಟ್ 31ರೊಳಗೆ ತನ್ನ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಲಖನೌನಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವಕ್ಕೆ ನಿರ್ದೇಶನ ನೀಡಿದೆ. ಪ್ರಕರಣವು 1992 ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದರ ಸಂಬಂಧವಾಗಿದ್ದು ಇದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ನಂಟು ಹೊಂದಿದೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇದೇ ಮಾದರಿ ಅನುಸರಿಸಲು ಹೇಳಿದೆ. ಈ ಮುನ್ನ 2019 ರ ಜುಲೈನಲ್ಲಿ ನ್ಯಾಯಾಲಯವು ಒಂಬತ್ತು ತಿಂಗಳಲ್ಲಿ ತೀರ್ಪು ನೀಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು.

ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಉಮಾ ಭಾರತಿ ಮತ್ತಿತರರು  ಸೇರಿದಂತೆ ಹಲವಾರು ಹಿರಿಯ ಬಿಜೆಪಿ ನಾಯಕರಿದ್ದಾರೆ. 1992 ರ ಡಿಸೆಂಬರ್‌ನಲ್ಲಿ  ಬಾಬರಿ ಮಸೀದಿ ಧ್ವಂಸದ ಹಿಂದೆ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಈ ಎಲ್ಲರೂ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ರಾಮಜನ್ಮಭೂಮಿ - ಬಾಬರಿ ಮಸೀದಿ ಭೂ ವಿವಾದದ ಕುರಿತು ಸುಪ್ರೀಂ ಕೋರ್ಟ್ ಈಗಾಗಲೇ ನವೆಂಬರ್ 9, 2019 ರಂದು ಸರ್ವಾನುಮತದ ತೀರ್ಪು ನೀಡಿದೆ. 2.77 ಎಕರೆ ವಿವಾದಿತ ಭೂಮಿಯನ್ನು ರಾಮಲಲ್ಲಾ ಗೆ ನೀಡಿದ್ದ ಕೋರ್ಟ್ ನೂತನ ಮಸೀದಿಗಾಗಿ ಪರ್ಯಾಯ ಭೂಮಿ ಕೊಡುವಂತೆ ಆದೇಶಿಸಿದೆ 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com