ಔರಂಗಾಬಾದ್ ರೈಲು ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ಅಗತ್ಯ ನೆರವು ನೀಡುವುದಾಗಿ ಭರವಸೆ

16 ಮಂದಿಯನ್ನು ಬಲಿಪಡೆದುಕೊಂಡ ಔರಂಗಾಬಾದ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: 16 ಮಂದಿಯನ್ನು ಬಲಿಪಡೆದುಕೊಂಡ ಔರಂಗಾಬಾದ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ದುರ್ಘಟನೆ ಸಂಬಂಧ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿರುವ ಅವರು, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ. 

ಔರಂಗಾಬಾದ್ ರೈಲು ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, ಸಾಕಷ್ಟು ನೋವು ತಂದಿದೆ. ಘಟನೆ ಸಂಬಂಂಧ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಘಟನೆಯನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾಧ್ಯವಾದಷ್ಟು ಎಲ್ಲಾ ರೀತಿಯ ಆಗತ್ಯ ನೆರವುಗಳನ್ನು ನೀಡಲಾಗುತ್ತದೆ ಎಂದು ಪ್ರಧಾನಿ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com