ತೆಲಂಗಾಣ, ತಮಿಳುನಾಡು ಸೇರಿ ಕೋವಿಡ್-19 ಉಲ್ಬಣಗೊಂಡಿರುವ 7 ರಾಜ್ಯಗಳಿಗೆ ಕೇಂದ್ರದ ತಂಡ ರವಾನೆ

ಕೋವಿಡ್-19 ಪ್ರಕರಣಗಳು ನಿಯಂತ್ರಣಕ್ಕೆ ಬಾರದೇ ಉಲ್ಬಣಗೊಳ್ಳುತ್ತಿರುವ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳ ತಂಡ ಕಳಿಸಲು ತೀರ್ಮಾನಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೋವಿಡ್-19 ಪ್ರಕರಣಗಳು ನಿಯಂತ್ರಣಕ್ಕೆ ಬಾರದೇ ಉಲ್ಬಣಗೊಳ್ಳುತ್ತಿರುವ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳ ತಂಡ ಕಳಿಸಲು ತೀರ್ಮಾನಿಸಿದೆ. 

ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಪ್ರದೇಶಗಳಿಗೆ ಅಗತ್ಯವಿರುವ ಸಹಕಾರ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ಅಧಿಕಾರಿಗಳು, ತಜ್ಞರ ತಂಡವನ್ನು ಕಳಿಸಲಿದೆ. 

ಕೇಂದ್ರ ಆರೋಗ್ಯ-ಕುಟುಂಬ ಕಲ್ಯಾಣ ಸಚಿವಾಲಯದಿಂದ ಹಿರಿಯ ಅಧಿಕಾರಿ, ಜಂಟಿ ಕಾರ್ಯದರ್ಶಿ ಮಟ್ಟದ ನೋಡಲ್ ಅಧಿಕಾರಿ, ಸಾರ್ವಜನಿಕ ಆರೋಗ್ಯ ತಜ್ಞರನ್ನೊಳಗೊಂಡ ತಂಡ ಇದಾಗಿರಲಿದೆ. ಕೋವಿಡ್-19 ಪ್ರಕರಣಗಳನ್ನು ನಿಯಂತ್ರಿಸುವುದಕ್ಕೆ ರಾಜ್ಯ ಆರೋಗ್ಯ ಇಲಾಖೆಗಳಿಗೆ ಈ ತಂಡ ಸಹಕಾರಿಯಾಗಲಿದೆ.

ಕೊರೋನ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆಯೂ ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯ ತಜ್ಞರನ್ನೊಳಗೊಂಡ 20 ತಂಡಗಳನ್ನು ಕಳಿಸಿತ್ತು. 

ಇದಕ್ಕೂ ಮುನ್ನ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರ ನೇತೃತ್ವದ ತಂಡವನ್ನು ಮುಂಬೈ ಗೆ ಕಳಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com