ತಮಿಳುನಾಡಿನ ಎಲ್ಲ ಮದ್ಯದಂಗಡಿ ಬಂದ್ ಮಾಡಿ: ಮದ್ರಾಸ್ ಹೈಕೋರ್ಟ್ ಆದೇಶ, ಸುಪ್ರೀಂ ಮೆಟ್ಟಿಲೇರಲು ಮುಂದಾದ ಸರ್ಕಾರ

ಮಾರಕ ಕೊರೋನಾ ವೈರಸ್ ಅಬ್ಬರ ಭಾರತದಲ್ಲಿ ಜೋರಾಗಿರುವಂತೆಯೇ ಕೇಂದ್ರ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದೆ. ಅದರಂತೆ ತಮಿಳುನಾಡಿನಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಮದ್ಯದಂಗಡಿ ಮುಂದೆ ಸಾಮಾಜಿಕ ಅಂತರ ಉಲ್ಲಂಘನೆಯಾಗುತ್ತಿದ್ದು, ರಾಜ್ಯದ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಮದ್ರಾಸ್ ಹೈಕೋರ್ಚ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ಮಾರಕ ಕೊರೋನಾ ವೈರಸ್ ಅಬ್ಬರ ಭಾರತದಲ್ಲಿ ಜೋರಾಗಿರುವಂತೆಯೇ ಕೇಂದ್ರ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದೆ. ಅದರಂತೆ ತಮಿಳುನಾಡಿನಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಮದ್ಯದಂಗಡಿ ಮುಂದೆ ಸಾಮಾಜಿಕ ಅಂತರ ಉಲ್ಲಂಘನೆಯಾಗುತ್ತಿದ್ದು, ರಾಜ್ಯದ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಮದ್ರಾಸ್ ಹೈಕೋರ್ಚ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಲಾಕ್ ಡೌನ್ ಮುಗಿಯುವವರೆಗೆ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶಿಸಿರುವ ಕೋರ್ಟ್, ಆನ್ ಲೈನ್ ಮದ್ಯ ಮಾರಾಟಕ್ಕೆ ಮತ್ತು ಹೋಂ ಡೆಲಿವರಿಗೆ ಅವಕಾಶ ನೀಡಿದೆ.

ಇದಕ್ಕು ಮುನ್ನ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಹ ಪ್ರತಿಕ್ರಿಯೆ ನೀಡಿದ್ದು, ಮದ್ಯ ಮಾರಾಟದ ಬದಲು ಹೋಂ ಡೆಲಿವರಿ ಮಾಡುವ ಕುರಿತು ರಾಜ್ಯ ಸರ್ಕಾರಗಳು ಚಿಂತಿಸಲಿ ಎಂದು ಸಲಹೆ ನೀಡಿತ್ತು.

ಇದರ ಬೆನ್ನಲ್ಲೇ ನ್ಯಾಯಮೂರ್ತಿಗಳಾದ ವಿನೀತ್ ಕೊಠಾರಿ ಮತ್ತು ಪುಷ್ಪ ಸತ್ಯನಾರಾಯಣ ಅವರನ್ನೊಳಗೊಂಡ ಹೈಕೋರ್ಚ್ ವಿಶೇಷ ವಿಭಾಗೀಯ ಪೀಠ, ರಾಜ್ಯದ ಎಲ್ಲಾ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶಿಸಿದೆ.

ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.

ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಮದ್ರಾಸ್ ಹೈಕೋರ್ಟ್ ಈ ಹಿಂದೆ ಮಾರ್ಗಸೂಚಿಗಳನ್ನು ನೀಡಿತ್ತು. ಮದ್ಯವನ್ನು ಖರೀದಿಸಲು ಕ್ಯೂನಲ್ಲಿ ನಿಂತವರ ನಡುವೆ ಆರು ಅಡಿ ಅಂತರವನ್ನು ಕಾಯ್ದುಕೊಳ್ಳುವಂತೆ ಅದು ಆದೇಶಿಸಿತ್ತು, ಖರೀದಿದಾರರ ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿತ್ತು. ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾದರೆ ಅಂಗಡಿಗಳು ಮುಚ್ಚಿಸುವುದಾಗಿಯೂ ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com