ಮದ್ಯದಂಗಡಿ ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಮದ್ಯದಂಗಡಿ ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೆಟ್ಟಿಲೇರಿದೆ.
ಮದ್ರಾಸ್ ಹೈಕೋರ್ಟ್ ಮತ್ತು ಮದ್ಯದಂಗಡಿ
ಮದ್ರಾಸ್ ಹೈಕೋರ್ಟ್ ಮತ್ತು ಮದ್ಯದಂಗಡಿ

ಚೆನ್ನೈ: ಮದ್ಯದಂಗಡಿ ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೆಟ್ಟಿಲೇರಿದೆ.

ಕೊರೋನಾ ವೈರಸ್ ಲಾಕ್ ಡೌನ್ ಗೆ ವಿನಾಯಿತಿ ನೀಡಿ ಮದ್ಯದಂಗಡಿ ತೆರೆಯಲು ಅನುವು ಮಾಡಿಕೊಟ್ಟ ಬೆನ್ನಲ್ಲೇ ಉಂಟಾಗಿದ್ದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಮದ್ರಾಸ್ ಹೈಕೋರ್ಟ್ ಮದ್ಯದಂಗಡಿಗಳನ್ನು ಬಂದ್ ಮಾಡಿ ಹೋಮ್ ಡೆಲಿವರಿ, ಆನ್ ಲೈನ್ ಮಾರಾಟಕ್ಕೆ  ಸಲಹೆ ನೀಡಿತ್ತು. ಇದೀಗ ಹೈಕೋರ್ಟ್ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಲ್ಲದೆ ಕೂಡಲೇ ತಮ್ಮ ಅರ್ಜಿಯನ್ನು ತುರ್ತು ವಿಚಾರಣೆಗೆ ತಂದು ಪರಿಶೀಲಿಸಬೇಕು ಎಂದು ಮನವಿ ಮಾಡಿರುವ ಸರ್ಕಾರ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು  ಎಂದು ಕೋರಿದೆ.

ಇನ್ನು ಅರ್ಜಿ ಸ್ವೀಕರಿಸಿರುವ ಸುಪ್ರೀಂ ಕೋರ್ಟ್ ಸೋಮವಾರ ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಮದ್ರಾಸ್ ಹೈಕೋರ್ಟ್ ಆದೇಶದಲ್ಲೇನಿದೆ?
ಮಾರಕ ಕೊರೋನಾ ವೈರಸ್ ಅಬ್ಬರ ಭಾರತದಲ್ಲಿ ಜೋರಾಗಿರುವಂತೆಯೇ ಕೇಂದ್ರ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದೆ. ಅದರಂತೆ ತಮಿಳುನಾಡಿನಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಮದ್ಯದಂಗಡಿ ಮುಂದೆ ಸಾಮಾಜಿಕ ಅಂತರ  ಉಲ್ಲಂಘನೆಯಾಗುತ್ತಿದ್ದು, ರಾಜ್ಯದ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಮದ್ರಾಸ್ ಹೈಕೋರ್ಚ್ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಲಾಕ್ ಡೌನ್ ಮುಗಿಯುವವರೆಗೆ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶಿಸಿರುವ ಕೋರ್ಟ್, ಆನ್ ಲೈನ್ ಮದ್ಯ ಮಾರಾಟಕ್ಕೆ ಮತ್ತು  ಹೋಂ ಡೆಲಿವರಿಗೆ ಅವಕಾಶ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com