ಭಾರತದಲ್ಲಿ ಕೊರೋನಾ ರಣಕೇಕೆ: 60,000 ಗಡಿ ದಾಟಿದ ಸೋಂಕಿತರ ಸಂಖ್ಯೆ, 2000ಕ್ಕೂ ಹೆಚ್ಚು ಮಂದಿ ಸಾವು

ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 60,000 ಗಡಿ ದಾಟಿದೆ. ಅ ಲ್ಲದೆ, ಮಹಾಮಾರಿ ವೈರಸ್ 2000ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

Published: 10th May 2020 08:27 AM  |   Last Updated: 10th May 2020 08:27 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ನವದೆಹಲಿ: ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 60,000 ಗಡಿ ದಾಟಿದೆ. ಅ ಲ್ಲದೆ, ಮಹಾಮಾರಿ ವೈರಸ್ 2000ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂ 3413 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 112 ಜನ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 62,915ಕ್ಕೆ ಏರಿದ್ದರೆ, ಸಾವಿನ ಸಂಖ್ಯೆ 2016ಕ್ಕೆ ತಲುಪಿದೆ. 

2020ರ ಜನ.30ರಂದು ಕೇರಳದಲ್ಲಿ ಮೊದಲಿಗೆ ಕಾಣಿಸಿಕೊಂಡು ಮಾ.12ರಂದು ಕರ್ನಾಟಕದಲ್ಲಿ ಕೊರೋನಾ ಸೋಂಕು ಮೊದಲ ಬಲಿ ಪಡೆದುಕೊಂಡಿತ್ತು. ನಂತರದ 58 ದಿನಗಲಲ್ಲಿ 2000ನೇ ಬಲಿ ಪಡೆದಂತೆ ಆಗಿದೆ. ಈ ನಡುವೆ 1875 ಜನರು ಈ ವರೆಗೆ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳುವ ಮೂಲಕ ಕೊರೋನಾ ಗೆಲ್ಲುವುದು ಅಸಾಧ್ಯವೇನಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ. 

ದೇಶದಲ್ಲೇ ಅತೀ ಹೆಚ್ಚು ಸೋಂಕಿತರು ಮತ್ತು ಸಾವು ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಶನಿವಾರ 1165 ಹೊಸ ಕೇಸ್ ನೊಂದಿಗೆ ಒಟ್ಟು ಸಂಖ್ಯೆ 20,228ಕ್ಕೆ ಏರಿದೆ. 

ಸಾವಿಗೀಡಾದವರ ಸಂಖ್ಯೆ 779ಕ್ಕೆ ಜಿಗಿದಿದೆ. ಇನ್ನು ತಮಿಳುನಾಡಿನಲ್ಲಿ 526, ಗುಜರಾತ್ ನಲ್ಲಿ 394, ರಾಜಸ್ತಾನದಲ್ಲಿ 129, ಮಧ್ಯಪ್ರದೇಶದಲ್ಲಿ 116 ಹಾಗೂ ಬಂಗಾಳದಲ್ಲಿ 108 ಅತೀಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿವೆ. 

ಈ ವರೆಗೆ ಅತೀ ಹೆಚ್ಚು ಸಾವು ದಾಖಲಾದ ರಾಜ್ಯಗಳೆಂದರೆ ಮಹಾರಾಷ್ಟ್ರ 779, ಗುಜರಾತ್ 472, ಮಧ್ಯಪ್ರದೇಶ 311, ಪ.ಬಂಗಾಳ 171, ರಾಜಸ್ತಾನದಲ್ಲಿ 106 ಮಂದಿ ಬಲಿಯಾಗಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp