ಸಿಕ್ಕಿಂನ ನಾಕು ಲಾ ಬಳಿ ಭಾರತ-ಚೀನಾ ನಡುವೆ ಘರ್ಷಣೆ: ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣ

ಸಿಕ್ಕಿಂನ ನಾಕು ಲಾ ಪ್ರದೇಶದ ಬಳಿಕ ಭಾರತ ಹಾಗೂ ಚೀನಾ ಯೋಧರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ ಕೆಲವರು ಗಾಯಗೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸಿಕ್ಕಿಂನ ನಾಕು ಲಾ ಪ್ರದೇಶದ ಬಳಿಕ ಭಾರತ ಹಾಗೂ ಚೀನಾ ಯೋಧರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ ಕೆಲವರು ಗಾಯಗೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಉಭಯ ರಾಷ್ಟ್ರಗಳ ಯೋಧರ ನಡುವೆ ಸ್ಥಳೀಯ ಮಟ್ಟದಲ್ಲಿ ಇಂದು ಮಾತುಕತೆ ನಡೆದಿದ್ದು. ಈ ವೇಳೆ ಉಭಯ ಸೇನೆಗಳ ನಡುವೆ ಘರ್ಷಣೆ ಏರ್ಪಟ್ಟಿದೆ ಎನ್ನಲಾಗುತ್ತಿದೆ. 

ಇಂತಹ ಪರಿಸ್ಥಿತಿಗಳು ಎದುರಾದಾಗ ಎಭಯ ಸೇನಾಪಡೆಗಳು ಶಿಷ್ಚಾಚಾರದಂತೆ ಪರಸ್ಪರ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳುತ್ತವೆ. ಸಾಕಷ್ಟು ಸಮಯದ ಬಳಿಕ ಇಂತಹ ಘಟನೆ ಮರುಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com