ಪುಲ್ವಾಮಾ, ಶೋಪಿಯಾನ್ ಹೊರತು ಕಾಶ್ಮೀರದ ಇತರೆಡೆಗಳಲ್ಲಿ 2ಜಿ ಮೊಬೈಲ್ ಡೇಟಾ ಸೇವೆ ಪುನಾರಂಭ

ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳನ್ನು ಹೊರತುಪಡಿಸಿ ಕಾಶ್ಮೀರ ಕಣಿವೆಯಲ್ಲಿ ಮಂಗಳವಾರದಿಂದ 2ಜಿ ಮೊಬೈಲ್ ಡೇಟಾ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳನ್ನು ಹೊರತುಪಡಿಸಿ ಕಾಶ್ಮೀರ ಕಣಿವೆಯಲ್ಲಿ ಮಂಗಳವಾರದಿಂದ 2ಜಿ ಮೊಬೈಲ್ ಡೇಟಾ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ. ಮೇ 12 ರಂದು ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ರಿಯಾಜ್  ಹಾಗೂ ಇನ್ನೋರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದ ನಂತರ ಎಲ್ಲಾ ಮೊಬೈಲ್ ಡೇಟಾ ಸೇವೆಗಳ ತಡೆಹಿಡಿಯಲಾಗಿತ್ತು.

370ನೇ ವಿಧಿ ರದ್ದತಿ ಮತ್ತು ರಾಜ್ಯವನ್ನು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಕಳೆದ ವರ್ಷ ಆಗಸ್ಟ್ ನಲ್ಲಿ ಕಣಿವೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಪೋಸ್ಟ್‌ಪೇಯ್ಡ್ ಮೊಬೈಲ್ ಫೋನ್ ಮತ್ತು ಬ್ರಾಡ್‌ಬ್ಯಾಂಡ್‌ನಲ್ಲಿನ 2ಜಿ  ಪೋಸ್ಟ್‌ಪೇಯ್ಡ್ ಮೊಬೈಲ್ ಫೋನ್ ಮತ್ತು ಬ್ರಾಡ್‌ಬ್ಯಾಂಡ್‌ನಲ್ಲಿನ 2ಜಿ ಸೇವೆಗಳನ್ನು ಇನ್ನೂ ಪುನಾರಂಭ ಮಾಡಿಲ್ಲ.

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಪುನಃಸ್ಥಾಪನೆಗಾಗಿ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಹಾಕಿದ್ದು ವಿವಾದಗಳನ್ನು ಪರಿಶೀಲಿಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವಲಯದ(ಎಂಎಚ್‌ಎ೦  ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಅಧಿಕಾರ ಸಮಿತಿಯನ್ನು ತಕ್ಷಣ ಸ್ಥಾಪಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿತ್ತು.ಎಂಎಚ್‌ಎ ಕಾರ್ಯದರ್ಶಿ ನೇತೃತ್ವದ ಕೇಂದ್ರ ಮತ್ತು ಕೇಂದ್ರಾಡಳಿತ ಪ್ರದೇಶದ  ಕಾರ್ಯದರ್ಶಿಗಳ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಆದೇಶಿಸಿದ್ದು ಈ ಸಮಿತಿಯಲ್ಲಿ ಸಂವಹನ ಸಚಿವಾಲಯದ ಕಾರ್ಯದರ್ಶಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯನ್ನು ಸಹ ಒಳಗೊಂಡಿರಬೇಕು ಎಂದಿದೆ. 

ಕೊರೋನಾವೈರಸ್ ಲಾಕ್‌ಡೌನ್ ಮಧ್ಯೆ ಶಿಕ್ಷಣ ಮತ್ತು ಇತರ ಸೇವೆಗಳನ್ನು ಒದಗಿಸಲು 2ಜಿ ಇಂಟರ್ನೆಟ್ ಸೇವೆಗಳು ಸಾಕಾಗುವುದಿಲ್ಲ ಎಂದು ಆರೋಪಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲು ನ್ಯಾಯಾಲಯಕ್ಕೆ ವಿವಿಧ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com