ಶ್ರಮಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 34 ವರ್ಷದ ವಲಸೆ ಕಾರ್ಮಿಕ ಸಾವು

ಪುಣೆಯಿಂದ ಪ್ರಯಾಗ್ ರಾಜ್ ಗೆ ಶ್ರಮಿಕ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 34 ವರ್ಷದ ವಲಸೆ ಕಾರ್ಮಿಕರೊಬ್ಬರು ಸೋಮವಾರ ಮೃತಪಟ್ಟಿದ್ದು, ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪುಣೆ: ಪುಣೆಯಿಂದ ಪ್ರಯಾಗ್ ರಾಜ್ ಗೆ ಶ್ರಮಿಕ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 34 ವರ್ಷದ ವಲಸೆ ಕಾರ್ಮಿಕರೊಬ್ಬರು ಸೋಮವಾರ ಮೃತಪಟ್ಟಿದ್ದು, ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಕಾರ್ಮಿಕನನ್ನು ಅಖಿಲೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಪುಣೆಯ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್ ಡೌನ್ ನಂತರ ತನ್ನ ಸ್ವಗ್ರಾಮ ಉತ್ತರ ಪ್ರದೇಶದ ಗೊಂಡಾಗೆ ತೆರಳುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಯಾಣದ ವೇಳೆಯ ಕಾರ್ಮಿಕ ಮೃತಪಟ್ಟಿದ್ದು, ಮೃತದೇಹವನ್ನು ರೈಲಿನಿಂದ ಹೊರ ತೆಗೆದು ಮಧ್ಯ ಪ್ರದೇಶದ ಸಾತ್ನಾ ಜಿಲ್ಲೆಯ ಮಜಾಗವಾನ್ ಆಸ್ಪತ್ರೆಗ ಸಾಗಿಸಲಾಗಿದೆ.

ಪುಣೆ-ಪ್ರಯಾಗ್ ರಾಜ್ ವಿಶೇಷ ರೈಲಿನಲ್ಲಿ ವಲಸೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕಾರ್ಮಿಕನಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿರುವ ಈ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಆರ್ ಪಿಎಫ್ ಡಿಜಿ ಅರುಣ್ ಕುಮಾರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com