ಗುಜರಾತ್ ಬಿಜೆಪಿ ಸಚಿವರ ಚುನಾವಣೆಯನ್ನೇ ಅನೂರ್ಜಿತಗೊಳಿಸಿದ ಹೈಕೋರ್ಟ್

ವಿಧಾನಸಭೆ ಚುನಾವಣೆಯಲ್ಲಿ ದುಷ್ಕೃತ್ಯ ಎಸಗಿದ ಮತ್ತು ತಿರುಚಿದ ಕಾರಣದಿಂದ ಗುಜರಾತ್ ಸರ್ಕಾರದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಸಚಿವ ಭೂಪೇಂದ್ರಸಿಂಹ ಚುಡಾಸಮಾ ಅವರ ಚುನಾವಣೆಯನ್ನು ಅನೂರ್ಜಿತವೆಂದು ಘೋಷಿಸಿದೆ.

Published: 12th May 2020 08:06 PM  |   Last Updated: 12th May 2020 08:06 PM   |  A+A-


chuda1

ಭೂಪೇಂದ್ರಸಿಂಹ ಚುಡಾಸಮಾ

Posted By : Lingaraj Badiger
Source : PTI

ಅಹಮದಾಬಾದ್: ವಿಧಾನಸಭೆ ಚುನಾವಣೆಯಲ್ಲಿ ದುಷ್ಕೃತ್ಯ ಎಸಗಿದ ಮತ್ತು ತಿರುಚಿದ ಕಾರಣದಿಂದ ಗುಜರಾತ್ ಸರ್ಕಾರದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಸಚಿವ ಭೂಪೇಂದ್ರಸಿಂಹ ಚುಡಾಸಮಾ ಅವರ ಚುನಾವಣೆಯನ್ನು ಅನೂರ್ಜಿತವೆಂದು ಘೋಷಿಸಿದೆ.

2017 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಧೋಲ್ಕಾ ಕ್ಷೇತ್ರದಿಂದ 327 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕನ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಅಶ್ವಿನ್ ರಾಥೋಡ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪರೇಶ್ ಉಪಾಧ್ಯಾಯ ಅವರು, ಚುಡಾಸಮಾ ಅವರ ಆಯ್ಕೆಯನ್ನು ರದ್ದುಪಡಿಸಿದ್ದಾರೆ.

ಚುಡಾಸಮಾ ಅವರು ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ, ವಿಶೇಷವಾಗಿ ಮತಗಳನ್ನು ಎಣಿಸುವ ಸಮಯದಲ್ಲಿ, ಚುನಾವಣಾ ಆಯೋಗದ ಹಲವು ಕಡ್ಡಾಯ ಸೂಚನೆಗಳನ್ನು ಉಲ್ಲಂಘಿಸಿದ್ದರು ಮತ್ತು ಅಕ್ರಮ ಎಸಗಿದ್ದಾರೆ ಎಂದು ರಾಥೋಡ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.

ಚುಡಾಸಮಾ ಪ್ರಸ್ತುತ ವಿಜಯ್ ರೂಪಾನಿ ಸರ್ಕಾರದಲ್ಲಿ ಶಿಕ್ಷಣ, ಕಾನೂನು ಮತ್ತು ನ್ಯಾಯ, ಶಾಸಕಾಂಗ ಮತ್ತು ಸಂಸದೀಯ ವ್ಯವಹಾರಗಳು ಮತ್ತು ಇತರ ಕೆಲವು ಇಲಾಖೆಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp