ಕರ್ನಾಟಕ, ಕೇರಳ ರಾಜ್ಯಗಳ ಕರಾವಳಿಯಲ್ಲಿ ಭಾರಿ ಮಳೆ..!!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಕರಾವಳಿ ಭಾಗಗಳಲ್ಲಿ ಇದೆ 15 ಮತ್ತು 16 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗಂಟೆಗೆ 100 ಕಿ.ಮೀ. ಗೂ ಹೆಚ್ಚು ವೇಗದಲ್ಲಿ ಬೀಸುವ ಗಾಳಿಯು ದಕ್ಷಿಣದ ರಾಜ್ಯಗಳ ಕರಾವಳಿ ಪ್ರದೇಶವನ್ನು ಅಪ್ಪಳಿಸಲಿದೆ ಎಂದೂ ಇಲಾಖೆ ಹೇಳಿದೆ.

ಇನ್ನು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com