ರೈಲು ಪ್ರಯಾಣ ವೇಳೆ ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಭಾರತೀಯ ರೈಲ್ವೇ ಇಲಾಖೆ ಮಂಗಳವಾರ(ಮೇ 12)ದಿಂದ ತನ್ನ ವಿಶೇಷ ಪ್ರಯಾಣಿಕ ರೈಲು ಸೇವೆಗಳನ್ನು ಪುನರಾರಂಭಿಸಲಿದೆ. ಮೊದಲ ಹಂತದಲ್ಲಿ ಹದಿನೈದು ವಿಶೇಷ ಪ್ರಯಾಣಿಕ ರೈಲುಗಳನ್ನು ಆರಂಭಿಸಲಾಗುತ್ತಿದೆ. ದೆಹಲಿ ರೈಲು ನಿಲ್ದಾಣದಿಂದ ಬೆಂಗಳೂರು, ಚೆನ್ನೈ, ತಿರುವನಂತಪುರಂ ಸೇರಿದಂತೆ ದೇಶದ ಹದಿನೈದು ನಗರಗಳಿಗೆ ಈ ರೈಲುಗಳು ಸಂಪರ್ಕ ಕಲ್ಪಿಸಲಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತೀಯ ರೈಲ್ವೇ ಇಲಾಖೆ ಮಂಗಳವಾರ(ಮೇ 12)ದಿಂದ ತನ್ನ ವಿಶೇಷ ಪ್ರಯಾಣಿಕ ರೈಲು ಸೇವೆಗಳನ್ನು ಪುನರಾರಂಭಿಸಲಿದೆ. ಮೊದಲ ಹಂತದಲ್ಲಿ ಹದಿನೈದು ವಿಶೇಷ ಪ್ರಯಾಣಿಕ ರೈಲುಗಳನ್ನು ಆರಂಭಿಸಲಾಗುತ್ತಿದೆ. ದೆಹಲಿ ರೈಲು ನಿಲ್ದಾಣದಿಂದ ಬೆಂಗಳೂರು, ಚೆನ್ನೈ, ತಿರುವನಂತಪುರಂ ಸೇರಿದಂತೆ ದೇಶದ ಹದಿನೈದು ನಗರಗಳಿಗೆ ಈ ರೈಲುಗಳು ಸಂಪರ್ಕ ಕಲ್ಪಿಸಲಿವೆ.

ಈ ಸಂದರ್ಭದಲ್ಲಿ ಪ್ರಯಾಣಿಕರು ಆರೋಗ್ಯ ಸೇತು ಆಪ್ ನ್ನು ಕಡ್ಡಾಯವಾಗಿ ತಮ್ಮ ಮೊಬೈಲ್ ಫೋನ್ ಗಳಲ್ಲಿ ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ, ಪ್ರಯಾಣಿಕರು ತಮ್ಮ ತಲುಪಬೇಕಾದ ಸ್ಥಳಕ್ಕೆ ಬಂದಾಗ ಆಯಾ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿವರಿಸುವ ಆರೋಗ್ಯ ಶಿಷ್ಟಾಚಾರಗಳನ್ನು ಪಾಲಿಸಬೇಕು. ಪ್ರಯಾಣಿಕರು ತಮ್ಮ ಪ್ರಯಾಣ ಆರಂಭಿಸುವ ಮುನ್ನ ಕೂಡ ಆರೋಗ್ಯ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ಹೇಳಲಾಗಿದೆ.

ಎಲ್ಲೆಲ್ಲಿಗೆ ಸಂಚಾರವಿದೆ?: ಇಂದಿನಿಂದ ದೆಹಲಿಯಿಂದ ಪ್ರಯಾಣಿಕರಿಗೆ ವಿಶೇಷ ರೈಲು ಸಂಚರಿಸುತ್ತಿದ್ದು ದಿಬ್ರುಗರ್, ಅಗರ್ತಲಾ, ಹೌರಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ್, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರ, ಮಡ್ಗೌಂ, ಮುಂಬೈ ಕೇಂದ್ರ, ಅಹಮದಾಬಾದ್ ಮತ್ತು ಜಮ್ಮು ತಾವಿಗಳಿಗೆ ಈ ರೈಲು ಸಂಚಾರ ಸೌಲಭ್ಯವಿರುತ್ತದೆ.
ರೈಲ್ವೆ ಇಲಾಖೆ ಅಧಿಕಾರಿಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, 45,533 ಪಿಎನ್ ಆರ್ ಜನರೇಟ್ ಆಗಿದ್ದು, ವಿಶೇಷ ರೈಲುಗಳಿಗೆ 82 ಸಾವಿರದ 317 ಮಂದಿ ಟಿಕೆಟ್ ಕಾಯ್ದಿರಿಸಿದ್ದಾರೆ. ಇದುವರೆಗೆ ಇಲಾಖೆಗೆ 16 ಕೋಟಿಯ 15 ಲಕ್ಷದ 63 ಸಾವಿರದ 821 ರೂಪಾಯಿ ಹಣ ಸಂಗ್ರಹವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com