ಮನಮೋಹನ್ ಸಿಂಗ್
ಮನಮೋಹನ್ ಸಿಂಗ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್

 ಮಾಜಿ ಪ್ರಧಾನಿ ಡಾ. ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ. 

ನವದೆಹಲಿ: ಮಾಜಿ ಪ್ರಧಾನಿ ಡಾ. ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಭಾನುವಾರ ಸಂಜೆ ಎದೆನೋವು ಕಾಣಿಸಿಕೊಂಡಿದ್ದ ಕಾರಣ ಸಿಂಗ್​ರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ವಿಶೇಷ ವಾರ್ಡಿನಲ್ಲಿ ಚಿಕಿತ್ಸೆ ನೀಡಿದ ಬಳಿಕ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ಪ್ರಕಟಣೆ ನೀಡಿದ್ದರು.

ಸಿಂಗ್​​ ಅವರಿಗೆ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು.  ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಅವರ ಚಿಕಿತ್ಸೆ ಮೇಲ್ವಿಚಾರಣೆ ವಹಿಸಿತ್ತು. 

ಇದೀಗ ವೈದ್ಯಕೀಯ ಸಲಹೆ ಮೇಲೆ ಸಿಂಗ್ ಅವರನ್ನು ಆಸ್ಪತ್ರೆಯಿಂದ ಬೀಡುಗಡೆ ಮಾಡಲಾಗಿದೆ. 2009ರಲ್ಲಿ ಡಾ. ಸಿಂಗ್​​ಗೆ ಏಮ್ಸ್​​ನಲ್ಲೇ ಎದೆನೋವಿಗಾಗಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.

Related Stories

No stories found.

Advertisement

X
Kannada Prabha
www.kannadaprabha.com