10.9 ರಿಂದ 12.2ಕ್ಕೆ; ಕೊರೋನಾ ವೈರಸ್ ದ್ವಿಗುಣ ಪ್ರಮಾಣ ಮತ್ತಷ್ಟು ಇಳಿಕೆ!

ಮಾರಕ ಕೊರೋನಾ ವೈರಸ್ ಪ್ರಸರಣ ಪ್ರಮಾಣ ಭಾರತದಲ್ಲಿ ಮತ್ತಷ್ಟು ನಿಧಾನಗತಿಯಾಗಿದ್ದು, ದೇಶದಲ್ಲಿ ವೈರಸ್ ಸೋಂಕಿತರ ದ್ವಿಗುಣ ಪ್ರಮಾಣ ಮತ್ತಷ್ಟು ಕುಸಿತವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಪ್ರಸರಣ ಪ್ರಮಾಣ ಭಾರತದಲ್ಲಿ ಮತ್ತಷ್ಟು ನಿಧಾನಗತಿಯಾಗಿದ್ದು, ದೇಶದಲ್ಲಿ ವೈರಸ್ ಸೋಂಕಿತರ ದ್ವಿಗುಣ ಪ್ರಮಾಣ ಮತ್ತಷ್ಟು ಕುಸಿತವಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕೊರೋನಾ ವೈರಸ್ ವ್ಯಾಪಕವಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ಘೋಷಿಸಿರುದ್ದ ದೇಶವ್ಯಾಪಿ ಲಾಕ್'ಡೌನ್ ನಿಂದಾಗಿ ವೈರಸ್ ಸೋಂಕಿತರ ದ್ವಿಗುಣ ಪ್ರಮಾಣ ಮತ್ತಷ್ಟು ಕುಸಿದಿದೆ. ಈ ಹಿಂದೆ ಪ್ರತೀ 10.9 ದಿನಗಳಿಗೆ ಸೋಂಕಿತರ ಸಂಖ್ಯೆ ದ್ವಿಗುಣವಾಗುತ್ತಿತ್ತು. ಇದೀಗ ಈ ಪ್ರಮಾಣ  12.2 ದಿನಗಳಿಗೆ ಇಳಿಕೆಯಾಗಿದೆ.

ರಾಷ್ಟ್ರವ್ಯಾಪಿ ಲಾಕ್'ಡೌನ್ ಜಾರಿಗೊಳಿಸುವುದಕ್ಕಿಂತ ಮೊದಲು ದೇಶದಲ್ಲಿ 3 ದಿನಕ್ಕೊಮ್ಮೆ ದುಪ್ಪಟ್ಟಾಗುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 12.2 ದಿನಕ್ಕೆ ದುಪ್ಪಟ್ಟಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲವಯ ಮಾಹಿತಿ ನೀಡಿದೆ. ಮಾರ್ಚ್ 25ಕ್ಕಿಂತ ಮೊದಲ ಅಂಕಿಅಂಶ ಹಾಗೂ ಕಳೆದ 7 ದಿನಗಳ ಅಂಕಿಅಂಶಗಳನ್ನು ತುಲನೆ ಮಾಡಿ ಈ ಮಾಹಿತಿ ನೀಡಿದೆ. 

19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುವ ವೇಗ ಇನ್ನೂ ಕಡಿಮೆಯಿದೆ. ದೇಶದಾದ್ಯಂತ ಕೊರೋನಾ ಸೋಂಕಿತರು ಗುಣಮುಖರಾಗುವ ಪ್ರಮಾಣ ಕೂಡ ಸುಧಾರಿಸಿದೆ. ಈಗಲೂ ಬೇರೆ ಬೇರೆ ದೇಶಗಳಲ್ಲಿ ಗುಣಮುಖರಾಗುವ ದರಕ್ಕಿಂದ ನಮ್ಮದು ಹೆಚ್ಚಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಭಾರತದಲ್ಲಿಯೂ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 122 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2,415ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ 47480 ಮಂದಿ  ಸೋಂಕಿತರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com