ಮಹಾರಾಷ್ಟ್ರಕ್ಕೆ ಕೊರೋನಾಘಾತ: 1061 ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ಪತ್ತೆ

ಮಹಾರಾಷ್ಟ್ರಕ್ಕೆ ಕೊರೋನಾಘಾತವಾಗಿದ್ದು, ಒಟ್ಟು 1061 ಮಂದಿ ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಮಹಾರಾಷ್ಟ್ರಕ್ಕೆ ಕೊರೋನಾಘಾತವಾಗಿದ್ದು, ಒಟ್ಟು 1061 ಮಂದಿ ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

1061 ಮಂದಿ ಪೊಲೀಸ್ ಸಿಬ್ಬಂದಿಗಳ ಪೈಕಿ 112 ಮಂದಿ ಪೊಲೀಸ್ ಅಧಿಕಾರಿಗಳೂ ಇದ್ದು, ಈ ವರೆಗೂ 174 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೆ, ಮಹಾಮಾರಿ ವೈರಸ್ಗೆ 9 ಮಂದಿ ಬಲಿಯಾಗಿದ್ದಾರೆ. 

ಈ ನಡುವೆ ಕೊರೋನಾ ಮಟ್ಟಹಾಕಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿದ್ದು, ಮಹಾರಾಷ್ಟ್ರದಲ್ಲಿ ಈ ವರೆಗೂ 85 ಮಂದಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ 803ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
 
ಈ ವರೆಗೂ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ 1,07,265 ಪ್ರಕರಣಗಳು ದಾಖಲಾಗಿದ್ದು, 20,471 ಮಂದಿ ಬಂಧನಕ್ಕೊಳಗಾಗಿದ್ದಾರೆ. ಅಲ್ಲದೆ, ಲಾಕ್'ಡೌನ್ ಉಲ್ಲಂಘಿಸಿದ್ದ 58, 291 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ರೂ.4,25,80,094 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com