ಕೊರೋನಾ ವಿರುದ್ಧ ಹೋರಾಟದಲ್ಲಿ ಭಾರತದ ಪಾತ್ರ ಮಹತ್ವದ್ದು: ಬಿಲ್ ಗೇಟ್ಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಬಿಲ್ ಗೇಟ್ಸ್ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದರು.
ವಿಡಿಯೊ ಕಾನ್ಫರೆನ್ಸ್ ಸಂವಾದದಲ್ಲಿ ಪಿಎಂ ನರೇಂದ್ರ ಮೋದಿ ಮತ್ತು ಬಿಲ್ ಗೇಟ್ಸ್
ವಿಡಿಯೊ ಕಾನ್ಫರೆನ್ಸ್ ಸಂವಾದದಲ್ಲಿ ಪಿಎಂ ನರೇಂದ್ರ ಮೋದಿ ಮತ್ತು ಬಿಲ್ ಗೇಟ್ಸ್

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಬಿಲ್ ಗೇಟ್ಸ್ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದರು.

ಕೋವಿಡ್-19ಗೆ ಸಂಬಂಧಪಟ್ಟಂತೆ ಜಾಗತಿಕ ಮಟ್ಟದ ಪ್ರಕ್ರಿಯೆ, ಕೆಲಸಗಳು, ಸೋಂಕನ್ನು ತಡೆಗಟ್ಟಲು ವೈಜ್ಞಾನಿಕ ಸಂಶೋಧನೆ, ಅಭಿವೃದ್ಧಿಯ ಅವಶ್ಯಕತೆ ಬಗ್ಗೆ ಇಬ್ಬರು ಗಣ್ಯರು ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಲ್ ಗೇಟ್ಸ್, ಸಂವಾದಕ್ಕೆ ಧನ್ಯವಾದಗಳು ಪಿಎಂ ನರೇಂದ್ರ ಮೋದಿ. ಕೊರೋನಾ ವೈರಸ್ ವಿರುದ್ಧ ಹೋರಾಡಲು ಜಾಗತಿಕ ಮಟ್ಟದಲ್ಲಿ ದೇಶಗಳ ಮಧ್ಯೆ ಸಹಕಾರ ಅತ್ಯಗತ್ಯ. ಕೋವಿಡ್-19ನಿಂದ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ಕಡಿಮೆ ಮಾಡಲು ಭಾರತದ ಪಾತ್ರ ಇಲ್ಲಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಲಸಿಕೆ, ಪರೀಕ್ಷೆ, ಚಿಕಿತ್ಸೆಗಳು ಎಲ್ಲರಿಗೂ ಲಭ್ಯವಾಗುವಂತೆ ಮಾಡಬೇಕು ಎಂದರು.

ಇದಕ್ಕೆ ದನಿಗೂಡಿಸಿದ ಪಿಎಂ ಮೋದಿ, ಜಾಗತಿಕ ಮಟ್ಟದ ಪ್ರಯತ್ನಕ್ಕೆ ಭಾರತ ಮನಃಪೂರ್ವಕವಾಗಿ ತನ್ನ ಸಾಮರ್ಥ್ಯವನ್ನು ಧಾರೆಯೆರೆಯಲು ಮುಂದಾಗಿದ್ದು ಕೊರೋನಾ ವಿರುದ್ಧ ಹೋರಾಟದಲ್ಲಿ ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂದು ಜಾಗತಿಕ ಮಟ್ಟದಲ್ಲಿ ದೇಶಗಳ ಜೊತೆ ಚರ್ಚೆ ನಡೆಸಲು ಸಿದ್ಧವಿದೆ ಎಂದರು.

ಆರೋಗ್ಯ ಬಿಕ್ಕಟ್ಟಿನ ವಿರುದ್ಧದ ಹೋರಾಟದಲ್ಲಿ ಭಾರತ ಕೈಗೊಂಡ ಪ್ರಜ್ಞಾಪೂರ್ವಕ ವಿಧಾನವನ್ನು ಮೋದಿ ಈ ಸಂದರ್ಭದಲ್ಲಿ ಒತ್ತಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com