ವಲಸಿಗ ಕಾರ್ಮಿಕರಿಗೆ ವಿಶೇಷ ರೈಲು, ಆಹಾರ, ಆಶ್ರಯ ಕಲ್ಪಿಸಿ: ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯದ ಸೂಚನೆ

ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ವಿಶೇಷ ರೈಲು, ಆಹಾರ, ಆಶ್ರಯ ಕಲ್ಪಿಸಬೇಕೆಂದು ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ. 
ವಲಸಿಗ ಕಾರ್ಮಿಕರಿಗೆ ವಿಶೇಷ ರೈಲು, ಆಹಾರ, ಆಶ್ರಯ ಕಲ್ಪಿಸಿ: ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯದ ಸೂಚನೆ
ವಲಸಿಗ ಕಾರ್ಮಿಕರಿಗೆ ವಿಶೇಷ ರೈಲು, ಆಹಾರ, ಆಶ್ರಯ ಕಲ್ಪಿಸಿ: ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯದ ಸೂಚನೆ

ನವದೆಹಲಿ: ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ವಿಶೇಷ ರೈಲು, ಆಹಾರ, ಆಶ್ರಯ ಕಲ್ಪಿಸಬೇಕೆಂದು ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ. 

ವಲಸಿಗ ಕಾರ್ಮಿಕರು ತಮ್ಮ ಮನೆಗಳಿಗೆ ತೆರಳಲು 100 ಶ್ರಮಿಕ್ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದೆ. ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಅಧಿಕೃತ ಪತ್ರ ಬರೆದಿದ್ದು, ಕಾರ್ಮಿಕರು ಕಾಲ್ನಡಿಗೆಯಲ್ಲಿ ಸಂಚರಿಸದಂತೆ ಜಾಗೃತಿ ಮೂಡಿಸಬೇಕೆಂದು ಹೇಳಿದೆ. 

ದೇಶದ ವಿವಿಧ ಭಾಗಗಳಲ್ಲಿ ಕಾರ್ಮಿಕರು ಕಾಲ್ನಡಿಗೆಯ ಮೂಲಕವೇ ತಮ್ಮ ಊರುಗಳಿಗೆ ತೆರಳುವುದು ಕಂಡುಬಂದಿದೆ. ಇದನ್ನು ತಡೆಗಟ್ಟಲು ವಲಸಿಗ ಕಾರ್ಮಿಕರಿಗೆ ವಿಶೇಷ ರೈಲು, ಆಹಾರ, ಆಶ್ರಯ ಕಲ್ಪಿಸಬೇಕು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕೆಂದು ಗೃಹ ಸಚಿವಾಲಯ ತಿಳಿಸಿದೆ. 
 
ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com