ಜಮ್ಮು-ಕಾಶ್ಮೀರದ ದೋಡಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ, ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

ಗುಂಡ್ನಾ ದೋಡಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. 

ಈ ವೇಳೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಸೇನಾಪಡೆಗ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿ ಉಗ್ರನೋರ್ವನನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ತಿಳಿದುಬಂದಿದೆ. 

ಹತ್ಯೆಯಾಗಿರುವ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವನಾಗಿದ್ದಾನೆಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಮತ್ತೋರ್ವ ಉಗ್ರ ಕೂಡ ಗಾಯಗೊಂಡಿದ್ದಾನೆಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com