ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿದ ಮಹಾರಾಷ್ಟ್ರಸರ್ಕಾರ

ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿ ಮಹಾರಾಷ್ಟ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮುಂಬೈ: ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿ ಮಹಾರಾಷ್ಟ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಮೂರನೇ ಹಂತದ ಲಾಕ್ ಡೌನ್ ಇಂದು ರಾತ್ರಿ ಅಂತ್ಯವಾಗಲಿದೆ. ನಾಳೆಯಿಂದ ದೇಶಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಗೆ ಬರಲಿದೆ. ಆದರೆ, ಮಹಾರಾಷ್ಟ್ರದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳೊಂದಿಗೆ ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿ ಅಲ್ಲಿನ ಸರ್ಕಾರ ಆದೇಶಿಸಿದೆ. 

ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 1 ಸಾವಿರದ 606 ಕೋವಿಡ್- 19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 30 ಸಾವಿರದ 706 ಆಗಿದೆ. ಸಾವಿನ ಸಂಖ್ಯೆ ಕೂಡಾ 67 ರಿಂದ 1 ಸಾವಿರದ 135ಕ್ಕೆ ಏರಿಕೆ ಆಗಿದೆ. 

ಲಾಕ್ ಡೌನ್ ವಿಸ್ತರಣೆಯಿಂದ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ನೆರವಾಗಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com