ಜಾರ್ಖಾಂಡ್'ನಲ್ಲಿ ಎನ್'ಕೌಂಟರ್: ಓರ್ವ ನಕ್ಸಲ್ ಹತ್ಯೆ, ಮತ್ತೊರ್ವನಿಗೆ ಗಾಯ

ಜಾರ್ಖಾಂಡ್'ನ ಸಿಂಮ್ದೇಗಾ ಜಿಲ್ಲೆಯಲ್ಲಿ ಮಾವೋವಾದಿಗಳ ವಿರುದ್ಧ ಎನ್'ಕೌಂಟರ್ ನಡೆದಿದ್ದು, ಈ ವೇಳೆ ಓರ್ವ ನಕ್ಸಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸಿಮ್ದೇಗಾ: ಜಾರ್ಖಾಂಡ್'ನ ಸಿಂಮ್ದೇಗಾ ಜಿಲ್ಲೆಯಲ್ಲಿ ಮಾವೋವಾದಿಗಳ ವಿರುದ್ಧ ಎನ್'ಕೌಂಟರ್ ನಡೆದಿದ್ದು, ಈ ವೇಳೆ ಓರ್ವ ನಕ್ಸಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 

ಸಿಮ್ದೇಗಾ ಜಿಲ್ಲೆಯಲ್ಲಿ ನಕ್ಸಲರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ನಕ್ಸಲರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಪೊಲೀಸರು ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿತ್ತು ಎಂದು ವರದಿಗಳಿ ತಿಳಿಸಿವೆ. 

ಇಂದು ಬೆಳಿಗ್ಗೆ ಎನ್'ಕೌಂಟರ್ ನಡೆದಿದ್ದು, ಓರ್ವ ನಕ್ಸಲ್'ನನ್ನು ಹತ್ಯೆ ಮಾಡಲಾಗಿದೆ. ಅಲ್ಲದೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆಂದು ತಿಳಿದುಬಂದಿದೆ. 

ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com