ಸೋನಿಯಾ ಗಾಂಧಿಗೆ ಕೈ ಮುಗಿದು ಕೇಳಿಕೊಂಡ ನಿರ್ಮಲಾ ಸೀತಾರಾಮನ್: ಏನು, ಏಕೆ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊರೊನಾ ವೈರಸ್ ಹಾವಳಿಯ ಪರಿಣಾಮವಾಗಿ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ಎದುರಿಸಲು, ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್‌ನ ಕೊನೆಯ ಹಂತದ ಘೋಷಣೆಗಳನ್ನು ಭಾನುವಾರ ಮಾಡಿದರು.
ಕೈಮುಗಿದು ಕೇಳಿಕೊಂಡ ಸಚಿವೆ ನಿರ್ಮಲಾ ಸೀತಾರಾಮನ್
ಕೈಮುಗಿದು ಕೇಳಿಕೊಂಡ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊರೊನಾ ವೈರಸ್ ಹಾವಳಿಯ ಪರಿಣಾಮವಾಗಿ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ಎದುರಿಸಲು, ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್‌ನ ಕೊನೆಯ ಹಂತದ ಘೋಷಣೆಗಳನ್ನು ಭಾನುವಾರ ಮಾಡಿದರು.

ಪತ್ರಿಕಾಗೋಷ್ಠಿಯ ಕೊನೆಗೆ ವಿಪಕ್ಷಗಳನ್ನು ಉದ್ದೇಶಿಸಿ ಅವರು, ವಲಸೆ ಕಾರ್ಮಿಕರ ವಿಚಾರದಲ್ಲಿ  ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಮನವಿ ಮಾಡಿದರು. ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ಸೇರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಇದರಲ್ಲಿ ರಾಜಕೀಯ ಬೇಡ. ಈ ಕುರಿತು ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವುದರಲ್ಲೇ ಕಾಲ ಕಳೆಯದೆ ಸಂಕಷ್ಟದಿಂದ ಪಾರಾಗಲು ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ಎಂದು ಎಲ್ಲಾ ವಿಪಕ್ಷಗಳಿಗೆ ಮನವಿ ಮಾಡಿದರು.

ವಲಸೆ ಕಾರ್ಮಿಕರ ಕುರಿತು ಹೇಳಿಕೆ ನೀಡುವಾಗ ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ಸಂದರ್ಭದಲ್ಲಿ ವಿಶೇಷವಾಗಿ ಮನವಿ ಮಾಡಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com