ಮುಂಬೈ-ಗೋವಾ ರೈಲಿನಲ್ಲಿ ಸಂಚರಿಸಿದ ಏಳು ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್!

ಮುಂಬೈ-ಗೋವಾ ರೈಲಿನಲ್ಲಿ ರಾಜ್ಯಕ್ಕೆ ಬಂದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ..ಪರಿಣಾಮ ರಾಜ್ಯದಲ್ಲಿ ಸೋಂಕಿತ ಸಂಖ್ಯೆ ಈವರೆಗೆ 29 ಕ್ಕೆ ತಲುಪಿದೆ ಎಂದು ರಾಜ್ಯದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಣಜಿ: ಮುಂಬೈ-ಗೋವಾ ರೈಲಿನಲ್ಲಿ ರಾಜ್ಯಕ್ಕೆ ಬಂದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ.ಪರಿಣಾಮ ರಾಜ್ಯದಲ್ಲಿ ಸೋಂಕಿತ ಸಂಖ್ಯೆ ಈವರೆಗೆ 29 ಕ್ಕೆ ತಲುಪಿದೆ ಎಂದು ರಾಜ್ಯದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾನುವಾರ ರಾಜ್ಯಕ್ಕೆ ಬಂದ ರೈಲಿನಲ್ಲಿ ಬಂದ ಪ್ರಯಾಣಿಕರ ಪೈಕಿ 7 ಪ್ರಯಾಣಿಕರಲ್ಲಿ ಸೋಂಕು ಇರುವುದು ಖಚಿತವಾಗಿದೆ ಎಂದು ಹೇಳಿದ್ದಾರೆ. 

ಇನ್ನೂ 350 ಮಾದರಿಗಳನ್ನು ಸಂಗ್ರಹ ಮಾಡಿದ್ದು ಅವುಗಳ ಪೈಕಿ 70 ಪ್ರಕರಣಗಳ ಪರೀಕ್ಷೆ ಇನ್ನೂ ಬಾಕಿಯಿದೆ ಪರೀಕ್ಷಾ ಸೌಲಭ್ಯಗಳನ್ನು ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ. 

ಈ ಹಿಂದೆ  ಸೋಂಕಿತ ಏಳು ರೋಗಿಗಳು ಗುಣಮುಖರಾಗಿದ್ದ ಹಿನ್ನೆಲೆಯಲ್ಲಿ ಮೇ 1 ರಂದು ಗೋವಾವನ್ನು ಹಸಿರು ವಲಯ ಎಂದು ಘೋಷಿಸಲಾಗಿತ್ತು. ಆದಾಗ್ಯೂ, ಕಳೆದ ಕೆಲವು ದಿನಗಳಿಂದ ಗೋವಾದಲ್ಲಿ ಕೋವಿಡ್- 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ಸಂಚರಿಸಿದ 6 ಮಂದಿ ಪ್ರಯಾಣಿಕರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com