ಶ್ರೀನಗರದಲ್ಲಿ ಎನ್ ಕೌಂಟರ್: ಇಬ್ಬರು ಯೋಧರಿಗೆ ಗಾಯ, ಮೊಬೈಲ್, ಇಂಟರ್ನೆಟ್ ಸೇವೆ ಕಡಿತ

ಇಲ್ಲಿನ ನವಕದಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಎನ್ ಕೌಂಟರ್ ನಲ್ಲಿ ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದೆ. ಸದ್ಯ ಆ ಭಾಗದಲ್ಲಿ ಮೊಬೈಲ್ , ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಇಲ್ಲಿನ ನವಕದಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಎನ್ ಕೌಂಟರ್ ನಲ್ಲಿ ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದೆ. ಸದ್ಯ ಆ ಭಾಗದಲ್ಲಿ ಮೊಬೈಲ್ , ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ.

ಶ್ರೀನಗರದ ಕನೆಮಝರ್ ನವಕದಲ್ ಪ್ರದೇಶದಲ್ಲಿ ಉಗ್ರಗಾಮಿಗಳ ಇರುವಿಕೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಶೋಧಕಾರ್ಯ ನಡೆಸಿದರು. ಪೊಲೀಸರು ಪ್ರದೇಶವನ್ನು ಸುತ್ತುವರಿದಾಗ ಉಗ್ರರು ದಾಳಿ ಮಾಡಲಾರಂಭಿಸಿದರು. ಈ ಸಮಯದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನ ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಎನ್ ಕೌಂಟರ್ ಆರಂಭವಾಗಿದ್ದು ಸುಮಾರು 5 ಗಂಟೆಗಳ ಕಾಲ ದಾಳಿ ಮುಂದುವರಿಯಿತು.

ಬಿಎಸ್ ಎನ್ ಎಲ್ ಪೋಸ್ಟ್ ಪೇಯ್ಡ್ ಹೊರತುಪಡಿಸಿ ಮೊಬೈಲ್ ಇಂಟರ್ನೆಟ್ ಮತ್ತು ಮೊಬೈಲ್ ಟೆಲಿಫೋನ್ ಸೇವೆಗಳನ್ನು ಜಮ್ಮು-ಕಾಶ್ಮೀರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಗಿತಗೊಳಿಸಲಾಗಿದೆ.ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸಿಆರ್ ಪಿಎಫ್ ಕಾರ್ಯನಿರತವಾಗಿದ್ದಾರೆ. ಹೆಚ್ಚಿನ ವಿವರ ತಿಳಿದುಬಂದಿಲ್ಲ.

ಕಳೆದ ಏಪ್ರಿಲ್ 28ರಂದು ಶೋಪಿಯಾನ್ ಜಿಲ್ಲೆಯ ಝೈನಪೊರಾ ಪ್ರದೇಶದಲ್ಲಿ ಎನ್ ಕೌಂಟರ್ ನಡೆದು ಮೂವರು ಉಗ್ರರು ಹತರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com