ಆರ್‌ಎಸ್‌ಎಸ್‌ ಕಾರ್ಯಕರ್ತನ ಕೊಲೆ ಪ್ರಕರಣ: ಎನ್ಐಎಯಿಂದ ಹಿಜ್ಬುಲ್ ಉಗ್ರನ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ಆರ್ ಎಸ್ಎಸ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ಆರ್ ಎಸ್ಎಸ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಮಂಗಳವಾರ ರಾತ್ರಿ  ಬಂಧಿಸಿದ್ದಾರೆ.

ಜಮ್ಮುವಿನಲ್ಲಿ  ಆರ್‌ಎಸ್‌ಎಸ್‌ ಕಾರ್ಯಕರ್ತ ಚಂದ್ರಕಾಂತ ಶರ್ಮಾ ಮತ್ತು ಅವರ ಖಾಸಗಿ ಭದ್ರತಾ ಅಧಿಕಾರಿಯನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಜಮ್ಮು ಜಿಲ್ಲೆಯ ಹಂಜಾಲಾ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)  ಮಂಗಳವಾರ ರಾತ್ರಿ ಬಂಧಿಸಿದೆ. ಬಂಧಿತ ಉಗ್ರನನ್ನು ರುಸ್ತುಂ ಅಲಿ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ನಮೂದಿಸಲಾಗಿದೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಪವಾರ್ ಅವರನ್ನು 2018ರಲ್ಲಿ ಕೊಲೆ ಮಾಡಲಾಗಿತ್ತು. ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತ ಶರ್ಮಾ ಮತ್ತು ಅವರ ಭದ್ರತಾ ಅಧಿಕಾರಿಯನ್ನು 2019ರ ಏಪ್ರಿಲ್‌ನಲ್ಲಿ ಕೊಲೆ ಮಾಡಲಾಗಿತ್ತು. ಎರಡೂ ಕೊಲೆಗಳನ್ನು ಖಂಡಿಸಿ ಜಮ್ಮುವಿನ  ಕಿಶ್ತ್‌ವಾರ್ ಪ್ರದೇಶದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಜಮ್ಮು ವಲಯದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರ ಕೊಲೆಗೆ ಸಂಬಂಧಿಸಿದಂತೆ ನಾಸಿ ಅಹಮದ್ ಶೇಖ್, ನಿಶಾದ್ ಅಹಮದ್ ಮತ್ತು ಆಜಾದ್ ಹುಸೇನ್ ಅವರನ್ನು ಪೊಲೀಸರು ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ  ಬಂಧಿಸಿದ್ದರು. 

ಕಿಶ್ತ್‌ವಾರ್ ಪ್ರದೇಶದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ಮತ್ತೆ ಚಾಲನೆ ನೀಡಲು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ನಾಯಕ ಜಹಂಗೀರ್ ಸರೂರಿ ಯತ್ನಿಸುತ್ತಿದ್ದಾನೆ. ಈ ಯತ್ನದ ಭಾಗವಾಗಿ ಈ ಕೊಲೆಗಳು ನಡೆದಿವೆ ಎಂದು ಪೊಲೀಸರು ಶಂಕಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com