ರಾಜಕೀಯ ಮಾಡುವ ಸಮಯ ಇದಲ್ಲ, ವಲಸಿಗರನ್ನು ಕರೆದೊಯ್ಯಲು ಅನುಮತಿ ಕೊಡಿ: ಪ್ರಿಯಾಂಕಾ ಗಾಂಧಿ

ವಲಸೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು, ಇದು ರಾಜಕೀಯ ಮಾಡುವ ಸಮಯ ಅಲ್ಲ. ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಬಸ್ ಗಳಿಗೆ ಅನುಮತಿ ನೀಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಒತ್ತಾಯಿಸಿದ್ದಾರೆ.
ಯುಪಿ ಗಡಿಯಲ್ಲಿ ನಿಂತಿರುವ ಬಸ್ ಗಳು
ಯುಪಿ ಗಡಿಯಲ್ಲಿ ನಿಂತಿರುವ ಬಸ್ ಗಳು

ಲಖನೌ: ವಲಸೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು, ಇದು ರಾಜಕೀಯ ಮಾಡುವ ಸಮಯ ಅಲ್ಲ. ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಬಸ್ ಗಳಿಗೆ ಅನುಮತಿ ನೀಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಒತ್ತಾಯಿಸಿದ್ದಾರೆ.

ಕಾರ್ಮಿಕರಿಗಾಗಿ ಕಾಂಗ್ರೆಸ್ ವ್ಯವಸ್ಥೆ ಮಾಡಿರುವ ಬಸ್‌ಗಳು ಉತ್ತರ ಪ್ರದೇಶ ಗಡಿಭಾಗದಲ್ಲಿ ಬಂದು ನಿಂತಿದ್ದರೂ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾನವೀಯತೆಗೆ ಬೆಲೆ ಕೊಡುತ್ತಿಲ್ಲ ಎಂದು ಪ್ರಿಯಾಂಕಾ ದೂರಿದ್ದಾರೆ.

ಕಾರ್ಮಿಕರನ್ನು ಕರೆದುಕೊಂಡು ಹೋಗಲು ಕಾಂಗ್ರೆಸ್ ನಿಯೋಜಿಸಿರುವ 1000 ಬಸ್‌ಗಳಿಗೆ ಅನುಮತಿ ನಿರಾಕರಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬುಧವಾರ ಪ್ರಿಯಾಂಕಾ ಗಾಂಧಿ 10 ನಿಮಿಷದ ವಿಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿದ್ದಾರೆ.

''ನಾವು ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಿದೆ. ಅವರು ಕೇವಲ ಭಾರತೀಯರಲ್ಲ, ಭಾರತವನ್ನು ಕಟ್ಟಿದವರು. ದೇಶವೂ ಅವರ ರಕ್ತ ಮತ್ತು ಬೆವರಿನಿಂದ ಸಾಗುತ್ತಿದೆ. ಇದು ಎಲ್ಲರ ಜವಾಬ್ದಾರಿ. ಇದು ರಾಜಕೀಯ ಮಾಡುವ ಸಮಯವಲ್ಲ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

''ಕಳೆದ 24 ಗಂಟೆಯಿಂದ ಗಡಿಭಾಗದಲ್ಲಿ ಬಸ್‌ಗಳು ನಿಂತಿದೆ. ನಿಮಗೆ ಬೇಕು ಅಂದ್ರೆ ಬಳಸಿಕೊಳ್ಳಿ. ನಮಗೆ ಅನುಮತಿ ಕೊಡಿ. ನಿಮಗೆ ಅಗತ್ಯವೆನಿಸಿದರೆ ಬಸ್‌ಗಳ ಮೇಲೆ ಬಿಜೆಪಿ ಭಾವುಟ, ಸ್ಟಿಕ್ಕರ್‌ಗಳನ್ನು ಹಾಕಿಕೊಳ್ಳಿ, ಈ ಬಸ್‌ಗಳು ನೀವು ನಿಯೋಜಿಸಿದ್ದೀರಿ ಎಂದು ಹೇಳಲು ಬಯಸಿದರೆ ಅದನ್ನು ಮಾಡಿ. ಆದರೆ, ಬಸ್‌ಗಳು ಸಂಚರಿಸಲು ಅನುವು ಮಾಡಿಕೊಡಿ'' ಎಂದು ಪ್ರಿಯಾಂಕಾ ಯುಪಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com