ಮಹಾರಾಷ್ಟ್ರ: 48 ಗಂಟೆಗಳಲ್ಲಿ 278 ಪೊಲೀಸರಲ್ಲಿ ಕೋವಿಡ್-19 ದೃಢ

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಸಾಗಿದ್ದು, ಕಳೆದ 48 ಗಂಟೆಗಳಲ್ಲಿ ಬರೋಬ್ಬರಿ 278 ಮಹಾರಾಷ್ಟ್ರ ಪೊಲೀಸರಲ್ಲಿ ವೈರಸ್ ದೃಢಪಟ್ಟಿದೆ ಎಂದು ಶುಕ್ರವಾರ ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಸಾಗಿದ್ದು, ಕಳೆದ 48 ಗಂಟೆಗಳಲ್ಲಿ ಬರೋಬ್ಬರಿ 278 ಮಹಾರಾಷ್ಟ್ರ ಪೊಲೀಸರಲ್ಲಿ ವೈರಸ್ ದೃಢಪಟ್ಟಿದೆ ಎಂದು ಶುಕ್ರವಾರ ವರದಿಗಳಿಂದ ತಿಳಿದುಬಂದಿದೆ. 

ಈ ಕುರಿತು ಮಹಾರಾಷ್ಟ್ರ ಪೊಲೀಸರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕಳೆದ 48 ಗಂಟೆಗಳಲ್ಲಿ ಒಟ್ಟು 278 ಮಂದಿ ಪೊಲೀಸರಲ್ಲಿ ಹೊಸದಾಗಿ ವೈರಸ್ ಕಾಣಿಸಿಕೊಂಡಿದ್ದು, ಇದರೊಂದಿಗೆ ಒಟ್ಟು ಸೋಂಕಿತ ಪೊಲೀಸರ ಸಂಖ್ಯೆ 1,666ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ. 

1,666 ಮಂದಿ ಸೋಂಕಿತರ ಪೈಕಿ ಈ ವರೆಗೂ 473 ಮಂದಿ ಗುಣುಖರಾಗಿದ್ದು, ಇನ್ನೂ 1,177 ಮಂದಿಯಲ್ಲಿ ಸೋಂಕಿನಿಂದ ಬಳಲುತ್ತಿದ್ದಾರೆ. ಈ ವರೆಗೂ ಮಹಾಮಾರಿ ವೈರಸ್'ಗೆ 16 ಮಂದಿ ಬಲಿಯಾಗಿದ್ದಾರೆಂದು ತಿಳಿಸಿದ್ದಾರೆ. 

ಕೊರೋನಾ ಲಾಕ್'ಡೌನ್ ವೇಳೆ ಸಂಭವಿಸಿದ ಹಲ್ಲೆ ಪ್ರಕರಣಗಳಲ್ಲಿ 86 ಮಂದಿ ಪೊಲೀಸರು ಗಾಯಗೊಂಡಿದ್ದು, ಪ್ರಕರಣ ಸಂಬಂಧ ಈ ವರೆಗೂ 823 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಇದಲ್ಲದೆ 41 ಮಂದಿ ಆರೋಗ್ಯಾಧಿಕಾರಿಗಳ ಮೇಲೆಯೂ ದಾಳಿ ನಡೆದಿದೆ. 

ಲಾಕ್'ಡೌನ್ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಈ ವರೆಗೂ 22,543 ಪ್ರಕರಣಗಳು ದಾಖಲಾಗಿದವೆ. 69,046 ವಾಹನಗಳನ್ನು ಜಪ್ತಿ ಮಾಡಲಾಗಿದ್ತು, ರೂ.5,19,63,497 ದಂಡ ವಸೂಲು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com