ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 6,654 ಮಂದಿಯಲ್ಲಿ ಸೋಂಕು ಪತ್ತೆ, 137 ಮಂದಿ ಸಾವು

ಲಾಕ್'ಡೌನ್ ಹಂತ ಹಂತವಾಗಿ ಸಡಿಲವಾಗುತ್ತಿರುವ ಬೆನ್ನಲ್ಲೇ, ದೇಶದಲ್ಲಿ ಕೊರೋನಾ ಪ್ರಕರಣಗಲು ಅಪಾಯಕಾರಿ ರೀತಿಯಲ್ಲಿ ಏರಿಕೆಯಾಗುತ್ತಿದೆ. ಭಾರತದಲ್ಲಿ ಒಂದೇ ದಿನ 6,654 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಇದು ಈ ವರೆಗಿನ ದಾಖಲಾದ ದೈನಂದಿನ ಗರಿಷ್ಠ ಪ್ರಮಾಣವಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಲಾಕ್'ಡೌನ್ ಹಂತ ಹಂತವಾಗಿ ಸಡಿಲವಾಗುತ್ತಿರುವ ಬೆನ್ನಲ್ಲೇ, ದೇಶದಲ್ಲಿ ಕೊರೋನಾ ಪ್ರಕರಣಗಲು ಅಪಾಯಕಾರಿ ರೀತಿಯಲ್ಲಿ ಏರಿಕೆಯಾಗುತ್ತಿದೆ. ಭಾರತದಲ್ಲಿ ಒಂದೇ ದಿನ 6,654 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಇದು ಈ ವರೆಗಿನ ದಾಖಲಾದ ದೈನಂದಿನ ಗರಿಷ್ಠ ಪ್ರಮಾಣವಾಗಿದೆ. 

ಇದರೊಂದಿಗೆ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 1,25,101ಕ್ಕೆ ತಲುಪಿದೆ. ಇನ್ನು ಶುಕ್ರವಾರ ಮಹಾಮಾರಿ 137 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 3720ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ 48,534 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ, 

ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 2940 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 44,582ಕ್ಕೆ ತಲುಪಿದೆ. ಈ ಪೈಕಿ ಮುಂಬೈ ನಗರಿಯೊಂದರಲ್ಲಿಯೇ ಶುಕ್ರವಾರ 1751 ಹೊಸ ಸೋಂಕಿತರು ಪತ್ತೆಯಾಗಿದ್ದು, ಅಲ್ಲಿ ವೈರಸ್ ಸೋಂಕಿತರ ಸಂಖ್ಯೆ 27,068ಕ್ಕೆ ಏರಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com