ನಿಮ್ಮ ಕೆಲಸ ನೀವು ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಆರ್‌ಬಿಐ ಸ್ಪಷ್ಟವಾಗಿ ಹೇಳಲಿ: ಪಿ ಚಿದಂಬರಂ

ಈ ವರ್ಷ ಜಿಡಿಪಿ ಪ್ರಮಾಣ ಕುಸಿಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಆರ್ಥಿಕತೆ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಆರ್ ಬಿಐ  ಸರ್ಕಾರಕ್ಕೆಸೂಚನೆ ನೀಡಬೇಕು ಎಂದಿದ್ದಾರೆ.
ಪಿ ಚಿದಂಬರಂ
ಪಿ ಚಿದಂಬರಂ

ನವದೆಹಲಿ: ಈ ವರ್ಷ ಜಿಡಿಪಿ ಪ್ರಮಾಣ ಕುಸಿಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಆರ್ಥಿಕತೆ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಆರ್ ಬಿಐ  ಸರ್ಕಾರಕ್ಕೆಸೂಚನೆ ನೀಡಬೇಕು ಎಂದಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಆರ್ ಬಿಐ ಹೇಳಿಕೆ ನಂತರವೂ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 20 ಲಕ್ಷ ಕೋಟಿ ರೂ. ಪರಿಹಾರ ಪ್ಯಾಕೇಜ್ ಅನ್ನೇ ಸಾಧನೆಯೆಂಬಂತೆ ಬಿಂಬಿಸುತ್ತಿದ್ದಾರೆ. ಆದರೆ, ಅದು  ಜಿಡಿಪಿಯ ಶೇ.1ಕ್ಕಿಂತ ಕಡಿಮೆ ಮೊತ್ತವಾಗಿದೆ ಎಂದು ಟೀಕಿಸಿದ್ದಾರೆ. 

ಸರ್ಕಾರ ಆರ್ಥಿಕತೆಯನ್ನು ನಕಾರಾತ್ಮಕ ಪ್ರಗತಿಯತ್ತ ಸಾಗಿಸುತ್ತಿರುವುದಕ್ಕೆ ಆರ್ ಎಸ್ ಎಸ್ ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ. ರಾಜ್ಯಪಾಲ ಶಕ್ತಿಕಾಂತ್ ದಾಸ್ ಅವರು, ಬೇಡಿಕೆ ಕುಸಿದಿದ್ದು, 2020-21ರ ಪ್ರಗತಿ ನಕಾರಾತ್ಮಕ ದಿಕ್ಕಿನತ್ತ ಸಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.  ಆದರೂ, ಅವರು ಹೆಚ್ಚು ದ್ರವೀಕರಣಕ್ಕೆ ಆದ್ಯತೆ ನೀಡುತ್ತಿರುವುದೇಕೆ? ಸರ್ಕಾರಕ್ಕೆ 'ನಿಮ್ಮ ಕೆಲಸ ಮಾಡಿ. ಆರ್ಥಿಕ ಕ್ರಮಗಳನ್ನು ಕೈಗೊಳ್ಳಿ' ಎಂದು ಹೇಳಬಾರದೇಕೆ ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಶುಕ್ರವಾರ ಆರ್ ಬಿಐ, ಈ ವರ್ಷ ಜಿಡಿಪಿ ಕಡಿಮೆಯಾಗಬಹುದು ಮತ್ತು ಮುಂದಿನ ವರ್ಷ ನಕಾರಾತ್ಮಕ ದಿಕ್ಕಿನಲ್ಲಿ ಸಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com