ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ಕೇಸು:ಇಬ್ಬರು ಜೆಎನ್ ಯು ವಿದ್ಯಾರ್ಥಿನಿಯರ ಬಂಧನ

ಕಳೆದ ಫೆಬ್ರವರಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಂದರ್ಭದಲ್ಲಿ ಈಶಾನ್ಯ ದೆಹಲಿಯ ಜಫ್ರಾಬಾದ್ ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಸಾವು ನೋವು ಉಂಟಾದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಜವಹರಲಾಲ್ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಪ್ರತಿಭಟನೆಯ ಚಿತ್ರ
ಪ್ರತಿಭಟನೆಯ ಚಿತ್ರ

ನವದೆಹಲಿ: ಕಳೆದ ಫೆಬ್ರವರಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಂದರ್ಭದಲ್ಲಿ ಈಶಾನ್ಯ ದೆಹಲಿಯ ಜಫ್ರಾಬಾದ್ ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಸಾವು ನೋವು ಉಂಟಾದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಜವಹರಲಾಲ್ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಫೆಬ್ರವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರ ನೇತೃತ್ವದಲ್ಲಿ ಪೂರ್ವ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ರ್ಯಾಲಿ ನಡೆದಿತ್ತು. ಅದರಲ್ಲಿ ಮಾಡಿದ್ದ ಭಾಷಣ ಪ್ರಚೋದಿಸಿ ಮರುದಿನ ರಾಜಧಾನಿಯಲ್ಲಿ ತೀವ್ರ ಹಿಂಸಾಚಾರ ನಡೆದು ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಬಂಧಿತರಿಬ್ಬರೂ ವಿದ್ಯಾರ್ಥಿನಿಯರಾಗಿದ್ದು ಅವರನ್ನು ದೇವಂಗಾನ ಕಳಿತಾ ಮತ್ತು ನತಾಶ ನರ್ವಾಲ ಎಂದು ಗುರುತಿಸಲಾಗಿದೆ. ಇವರು ದೆಹಲಿಯ ಪಿಂಜ್ರ ಟೊಡ್ ಗುಂಪಿಗೆ ಸೇರಿದವರಾಗಿದ್ದು ಅವರು ಕಾಲೇಜು ವಿದ್ಯಾರ್ಥಿನಿಯರ ಹಕ್ಕುಗಳಿಗಾಗಿ ಹೋರಾಡುತ್ತಿದ್ದರು.

ಬಂಧಿತರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 186 ಮತ್ತು 353ರಡಿ ಕೇಸು ದಾಖಲಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ಈ ಮಹಿಳೆಯರ ಗುಂಪು ಜಫ್ರಾಬಾದ್ ಮೆಟ್ರೊ ಸ್ಟೇಷನ್ ಹತ್ತಿರ ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ಮಾಡುತ್ತಿದ್ದರು. ಸಿಎಎ ಪ್ರತಿಭಟನೆಗೆ ಸಂಬಂಧಪಟ್ಟಂತೆ ಇತ್ತೀಚೆಗೆ ದೆಹಲಿ ಪೊಲೀಸರು ಹಲವು ವಿದ್ಯಾರ್ಥಿಗಳನ್ನು ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com