ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ ದಾಖಲೆಯ 6.767 ಸೋಂಕು ಪತ್ತೆ, 1,31.868ಕ್ಕೇರಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ಆರ್ಭಟ ಏರುತ್ತಲೇ ಹೋಗುತ್ತಿದ್ದು, ಒಂದೇ ದಿನ ದಾಖಲೆಯ 6,767 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,31,868ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಏರುತ್ತಲೇ ಹೋಗುತ್ತಿದ್ದು, ಒಂದೇ ದಿನ ದಾಖಲೆಯ 6,767 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,31,868ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಸೋಂಕಿತರ ಸಂಖ್ಯೆ ಜೊತೆ ಜೊತೆಗೆ ದೇಶದಲ್ಲಿ ಹೆಮ್ಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಏರುತ್ತಲೇ ಇದ್ದು, ನಿನ್ನೆ ಒಂದೇ ದಿನ 147 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3,867ಕ್ಕೆ ಏರಿಕೆಯಾಗಿದೆ. 

1,31,868 ಮಂದಿ ಸೋಂಕಿತರ ಪೈಕಿ 54,440 ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇನ್ನೂ 73,560 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಈ ನಡುವೆ ಮಹಾರಾಷ್ಟ್ರವನ್ನು ಕೊರೋನಾ ಬೆನ್ನು ಬಿಡದಂತೆ ಕಾಡುತ್ತಲೇ ಇದ್ದು, ಆ ರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 47,190ಕ್ಕೆ ತಲುಪಿದೆ. ತಮಿಳುನಾಡು 15,512, ಗುಜರಾತ್ 13,664, ದೆಹಲಿಯಲ್ಲಿ 12,910 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com